Advertisement
ಈ ಘಟನೆ ಕುರಿತು ಬಿಜೆಪಿ ಮುಖಂಡರು ಅಂತರ ಕಾಯ್ದುಕೊಳ್ಳುವುದು ಒಳಿತು. ಆರೋಪಿ ಪರ ಹೇಳಿಕೆ ನೀಡುವುದು ಬೇಡ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆ ನೀಡಿರುವುದಾಗಿ ವರದಿ ಹೇಳಿದೆ.
Related Articles
Advertisement
ಬಲ್ಲಿಯಾ ಶೂಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 10 ಮಂದಿಯನ್ನು ಬಂಧಿಸಲಾಗಿದೆ. ಅಕ್ಟೋಬರ್ 16ರಂದು ಪಡಿತರ ಅಂಗಡಿಗಳನ್ನು ಅಧಿಕಾರಿಗಳ ಸುಪರ್ದಿಗೆ ವಹಿಸುವ ಕಾರ್ಯಕ್ರಮವೊಂದರಲ್ಲಿ ಮಾತಿನ ಚಕಮಕಿ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿತ್ತು.
ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳ ಸಮ್ಮುಖದಲ್ಲೇ ಬಿಜೆಪಿ ಕಾರ್ಯಕರ್ತ ಧೀರೇಂದ್ರ ಸಿಂಗ್ ಎಂಬಾತ 46 ವರ್ಷದ ಜೈಪ್ರಕಾಶ್ ಎಂಬ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆಗೈದಿದ್ದ. ಈತ ಶಾಸಕ ಸುರೇಂದ್ರ ಸಿಂಗ್ ನಿಕಟವರ್ತಿ ಎಂದು ವರದಿ ನಂತರ ತಿಳಿದುಬಂದಿತ್ತು. ಘಟನೆ ನಡೆದ ಕೂಡಲೇ ಧೀರೇಂದ್ರ ಸಿಂಗ್ ತಲೆಮರೆಸಿಕೊಂಡಿದ್ದ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಯನ್ನು ಅಮಾನತುಗೊಳಿಸಿ ಮುಖ್ಯಮಂತ್ರಿ ಆದಿತ್ಯನಾಥ್ ಆದೇಶ ಹೊರಡಿಸಿದ್ದರು.