Advertisement

ವೈಯಕ್ತಿಕ ಪ್ರತಿಷ್ಠೆ ಬಿಟ್ಟು ಗೆಲುವಿಗೆ ಶ್ರಮಿಸಿ

12:09 PM Aug 11, 2018 | |

ತಿ.ನರಸೀಪುರ: ಭಿನ್ನಾಭಿಪ್ರಾಯ ಮತ್ತು ವೈಯುಕ್ತಿಕ ಪ್ರತಿಷ್ಠೆಯನ್ನು ಬದಿಗಿಟ್ಟು ಕಾರ್ಯಕರ್ತರು ಹಾಗೂ ಮುಖಂಡರು ಸಂಘಟಿತರಾಗಿ ದುಡಿದರೆ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ಹಿಡಿಯಬಹುದು ಎಂದು ಚುನಾವಣಾ ಪ್ರಭಾರಿ ಹೇಮಂತ್‌ಕುಮಾರ್‌ಗೌಡ ಹೇಳಿದರು.

Advertisement

ಪಟ್ಟಣದ ತಾಲೂಕು ಕಚೇರಿ ರಸ್ತೆಯಲ್ಲಿ ಪುರಸಭೆ ಚುನಾವಣೆಯ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಅವಕಾಶವನ್ನು ನೀಡುವಂತಹ ನಗರ ಮತ್ತು ಪಟ್ಟಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಗಳ ಗೆಲುಗೆ ನಿಷ್ಠಯಿಂದ ದುಡಿದರೆ ಪರಿವರ್ತಿತ ಪುರಸಭೆಯಲ್ಲೂ ಕಮಲ ಅರಳಲಿದೆ. ವಾರ್ಡುಗಳಲ್ಲಿ ಗೆಲ್ಲಲು ಈಗಿನಿಂದಲೇ ಕಾರ್ಯತಂತ್ರವನ್ನು ರೂಪಿಸಬೇಕೆಂದು ಸಲಹೆ ನೀಡಿದರು.

ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿರುವ ಎಚ್‌.ಡಿ.ಕುಮಾರಸ್ವಾಮಿ ಅವರು ಆಡಳಿತದಲ್ಲಿ ಹಿಡಿತ ಸಾಧಿಸುವಲ್ಲಿ ವಿಫ‌ಲರಾಗಿದ್ದು, ಕಾಂಗ್ರೆಸ್‌ನ ಕೈಗೊಂಬೆಯಾಗಿದ್ದಾರೆ. ಅಪವಿತ್ರ ಮೈತ್ರಿ ಸರ್ಕಾರದ ವಿರುದ್ಧ ಬೇಸರಗೊಂಡಿರುವ ಜನರು ನಗರ ಮತ್ತು ಪಟ್ಟಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅವೆರಡು ಪಕ್ಷಗಳ ಅಭ್ಯರ್ಥಿಗಳನ್ನು ತಿರಸ್ಕರಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂದು ತಿಳಿಸಿದರು.

ಜಿಪಂ ಸದಸ್ಯ ಸದಾನಂದ, ಹಿರಿಯ ಮುಖಂಡ ತೋಟದಪ್ಪ ಬಸವರಾಜು, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಪರ ಆಯುಕ್ತ ಹೆಳವರಹುಂಡಿ ಸಿದ್ಧಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂರ್ತಿ, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಿ.ಕೃಷ್ಣಮೂರ್ತಿ, ವರುಣಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಾದಪ್ಪ, ಉಪಾಧ್ಯಕ್ಷೆ ಎಸ್‌.ಲಕ್ಷ್ಮೀ, ತಾಪಂ ಮಾಜಿ ಅಧ್ಯಕ್ಷ ಮಹದೇವಪ್ಪ, ಟೌನ್‌ ಅಧ್ಯಕ್ಷ ಬೀರಭದ್ರಪ್ಪ, ಮುಖಂಡರಾದ ಶಿವಪ್ರಸಾದ್‌, ಬಿ.ಮಹೇಶ, ಗಿರೀಶ್‌, ಕೇತಹಳ್ಳಿ ಬಸವರಾಜು ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next