Advertisement

ಶಿಡ್ಲಘಟ್ಟ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಫಲಿತಾಂಶಕ್ಕೆ ತಡೆ

10:25 PM Oct 31, 2020 | sudhir |

ಚಿಕ್ಕಬಳ್ಳಾಪುರ : ತೀವ್ರ ಕುತೂಹಲ ಕೆರಳಿಸಿದ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಆದರೇ ಚುನಾವಣಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿ ರಘುನಂದನ್ ಅವರು ಫಲಿತಾಂಶವನ್ನು ಪ್ರಕಟಿಸಿಲ್ಲ.

Advertisement

ಒಟ್ಟು 31 ಸದಸ್ಯರನ್ನು ಹೊಂದಿರುವ ಶಿಡ್ಲಘಟ್ಟ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 13,ಜೆಡಿಎಸ್10,ಬಿಎಸ್‍ಪಿ 02,ಬಿಜೆಪಿ02,ಪಕ್ಷೇತರ 4 ಮಂದಿ ಗೆಲುವು ಸಾಧಿಸಿದ್ದಾರೆ ಅಧ್ಯಕ್ಷ ಸ್ಥಾನ ಪರಿಶಿಷ್ಠ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್-ಜೆಡಿಎಸ್-ಬಿಎಸ್ಪಿ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದರು ಚುನಾವಣೆ ಪ್ರಕ್ರಿಯೆ ನಡೆಸಿದ ಚುನಾವಣಾಧಿಕಾರಿಗಳು ಫಲಿತಾಂಶವನ್ನು ಪ್ರಕಟಿಸಲು ತಡೆಹಿಡಿದರು.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಯಾರು ಮತ ಚಲಾಯಿಸಿದರು ಜೆಡಿಎಸ್ ಅಭ್ಯರ್ಥಿ ಪರವಾಗಿ ಯಾರು ಮತ ಚಲಾಯಿಸಿದರು ಎಂಬುದನ್ನು ಬಹಿರಂಗಪಡಿಸಲು ಚುನಾವಣಾಧಿಕಾರಿಗಳು ನಿರಾಕರಿಸಿದರು ಒಟ್ಟು 31 ಸದಸ್ಯರ ಬಲ ಹೊಂದಿರುವ ನಗರಸಭೆಯಲ್ಲಿ ಸಂಸದರು ಹಾಗೂ ಶಾಸಕರು ಸೇರಿ 33 ಸದಸ್ಯರ ಪೈಕಿ 31 ಮಂದಿ ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಿದರು ಎಂದು ಚುನಾವಣಾಧಿಕಾರಿ ರಘುನಂದನ್ ಮಾಹಿತಿ ನೀಡಿದರು.

ಇದನ್ನೂ ಓದಿ:ಅದಾನಿ ಸಮೂಹ ಸಂಸ್ಥೆಗೆ ಮಂಗಳೂರು ವಿಮಾನ ನಿಲ್ದಾಣ ಹಸ್ತಾಂತರ

ಅನಾರೋಗ್ಯದ ಕಾರಣದಿಂದ ಶಾಸಕ ವಿ.ಮುನಿಯಪ್ಪ ಅವರು ಮತದಾನದಿಂದ ಹೊರಗುಳಿದಿದ್ದರು ಅದೇ ರೀತಿಯಲ್ಲಿ ಕಾಂಗ್ರೆಸ್ ಸದಸ್ಯರೊಬ್ಬರು ಚುನಾವಣೆ ಪ್ರಕ್ರಿಯೆಯಿಂದ ದೂರ ಇದ್ದು ಕುತೂಹಲ ಕೆರಳಿಸಿದರು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ಸುರೇಶ್,ಪಿಎಸ್‍ಐ ಲಿಯಾಖತ್ತುಲ್ಲಾ ಮತ್ತು ಸಿಬ್ಬಂದಿ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದ್ದರು.

Advertisement

ಉದ್ರಿಕ್ತ ಗುಂಪನ್ನು ಚದುರಿಸಲು ಹರಸಾಹಸ: ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಪ್ರತಿಯೊಂದು ಕ್ಷಣ ಕುತೂಹಲ ಕೆರಳಿಸಿತು ಕೋಟೆ ವೃತ್ತದಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಗುಂಪು ಗುಂಪಾಗಿ ನೆರದಿದ್ದರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಸದಸ್ಯರು ಬಸ್‍ನಲ್ಲಿ ಬಂದು ಮತದಾನ ಮಾಡಿದರು ಬೌನ್ಸರ್‍ಗಳ ಭದ್ರತೆಯಲ್ಲಿ ನಗರಸಭಾ ಸದಸ್ಯರು ಬಂದಿದ್ದು ವಿಶೇಷವಾಗಿತ್ತು ಉದ್ರಿಕ್ತ ಗುಂಪನ್ನು ಚದುರಿಸಲು ಪೋಲಿಸರು ಹರಸಾಹಸ ಮಾಡಿದರು ಇದೇ ಸಂದರ್ಭದಲ್ಲಿ ಜೆಡಿಎಸ್ ಮತ್ತು ಬಿಎಸ್‍ಪಿ ಕಾರ್ಯಕರ್ತರು ಸಂಭ್ರಮಿಸಿದ್ದು ವಿಶೇಷವಾಗಿತ್ತು.

ನಗರಸಭೆಯ ಚುನಾವಣಾ ಪ್ರಕ್ರಿಯೆ ವೇಳೆಯಲ್ಲಿ ತಹಶೀಲ್ದಾರ್ ಕೆ.ಅರುಂಧತಿ,ನಗರಸಭೆಯ ಪೌರಾಯುಕ್ತ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next