ಹಿಮಾಚಲ ಪ್ರದೇಶ: ಭಾರೀ ಮಳೆಯಿಂದ ಹಿಮಾಚಲ ಪ್ರದೇಶದಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತದ ಭಯಾನಕ ವೀಡಿಯೊಗಳು ಹೊರಬರುತ್ತಿದ್ದಂತೆ, ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಇಂದು ರಾಜ್ಯದ ಜನರನ್ನು ಮುಂದಿನ 24 ಗಂಟೆಗಳ ಕಾಲ ಮನೆಯಲ್ಲೇ ಇರುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಅಧಿಕಾರಿಗಳೊಂದಿಗೆ ಜನರಿಗೆ ಸಹಕರಿಸುವಂತೆ ಒತ್ತಾಯಿಸಿದ್ದಾರೆ.
ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂದಿನ 24 ಗಂಟೆಗಳ ಕಾಲ ಜನರು ಒಗ್ಗಟ್ಟಿನಿಂದ ಕಷ್ಟವನ್ನು ಎದುರಿಸಲು ಮತ್ತು ತಮ್ಮ ತಮ್ಮ ಮನೆಗಳಲ್ಲಿ ಇರಬೇಕೆಂದು ನಾನು ಒತ್ತಾಯಿಸುತ್ತೇನೆ, ”ಎಂದು ಮುಖ್ಯಮಂತ್ರಿ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.
ಯಾವುದೇ ತುರ್ತು ಸಂದರ್ಭದಲ್ಲಿ ನೀವು ನನ್ನ ನಂಬರ್ ಗೆ ಕರೆಮಾಡಬಹುದು ಜೊತೆಗೆ ನಾನು ಕೂಡ 24 ಗಂಟೆಗಳ ಕಾಲ ಲಭ್ಯವಿರುತ್ತೇನೆ” ಎಂದು ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ, ನಿರಂತರ ಭಾರೀ ಮಳೆಯಿಂದ ಉಂಟಾದ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳಿಂದ, ಮನೆಗಳು ಮತ್ತು ಕಟ್ಟಡಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿದ್ದು ಮತ್ತು ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ 13 ಜಿಲ್ಲೆಗಳ ಪೈಕಿ 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: British nurse: ರೋಗಿಯೊಂದಿಗೆ ನರ್ಸ್ ಸಂಬಂಧ; ಸಂಭೋಗದ ವೇಳೆಯೇ ಮೃತಪಟ್ಟ ರೋಗಿ