ಬೆಂಗಳೂರು: ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಚಿತ್ರದ ಸಂಗೀತ ಬಳಕೆ ಮಾಡಿಕೊಂಡು ಹಕ್ಕುಸ್ವಾಮ್ಯ ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ಯನ್ನು ಹೈಕೋರ್ಟ್‌ನ ಧಾರವಾಡ ಪೀಠದಿಂದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್‌ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣ ಸಂಬಂಧ ನಡೆಯುತ್ತಿರುವ ತನಿಖೆಗೆ ಮುಂದಿನ ವಿಚಾರಣೆ ವರೆಗೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿತು.
ಅರ್ಜಿದಾರರ ಪರ ಎ.ಎಸ್. ಪೊನ್ನಣ್ಣ ವಾದ ಮಂಡಿಸಿ, ಚಿತ್ರದ ಸಂಗೀತ ಬಳಕೆ ಆರೋಪದಲ್ಲಿ ಈ ಹಿಂದೆ ನ್ಯಾಯಾಲಯಕ್ಕೆ ನಿಡಿದ ಭರವಸೆಯಂತೆ ಹಾಡಿನ ತುಣುಕುಗಳನ್ನು ಸಾಮಾಜಿಕ ಜಾಲಾತಾಣ ಗಳಿಂದ ತೆಗೆದು ಹಾಕಲಾಗಿದೆ. ಜತೆಗೆ ಕೆಜಿಎಫ್ ಚಿತ್ರದ ದೃಶ್ಯಗಳನ್ನು ಬಳಕೆ ಮಾಡಿಕೊಂಡಿಲ್ಲ. ಯಾತ್ರೆಯ ದೃಶ್ಯಗಳಿಗೆ ಹಿನ್ನಲೆ ಸಂಗೀತ ಬಳಕೆ ಮಾಡಿಕೊಳ್ಳಲಾಗಿತ್ತು.
ಈ ಸಂಬಂಧ ದಾಖಲಾಗಿರುವ ಎಫ್ಐಆರ್‌ನಲ್ಲಿ ಯಾವುದೇ “ಕಾಗ್ನಿಜಬಲ್’ (ಸಂಜ್ಞೆ) ಆರೋಪಗ ಳಿಲ್ಲ. ಆದರೆ, ವೀಡಿಯೋದಲ್ಲಿ ರಾಹುಲ್ ಗಾಂಧಿ ಅವರ ಮುಖ ಕಾಣುತ್ತದೆ ಎಂಬ ಕಾರಣಕ್ಕಾಗಿ ಅವರನ್ನು ಆರೋಪಿಯ ನ್ನಾಗಿಸಲಾಗಿದೆ.
ಬೆಂಗಳೂರಿನಲ್ಲಿ ಯಾತ್ರೆ ನಡೆಯದಿದ್ದರೂ, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಹಕ್ಕ ಸ್ವಾಮ್ಯ ಉಲ್ಲಂಘನೆ ಆರೋಪವಿದ್ದರೂ, ಉದ್ದೇಶ ಪೂರ್ವಕವಾಗಿ ಎಫ್ಐಆರ್ ದಾಖಲಿಸಿಕೊಳ್ಳ ಲಾಗಿದೆ ಎಂದು ವಾದಿಸಿದರು.