Advertisement
ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ನಗರ ಹಾಗೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಅಭಿಪ್ರಾಯ ತಿಳಿಯಲು ಚುನಾವಣೆಯೊಂದೇ ಮಾರ್ಗವಾದ ಹಿನ್ನೆಲೆಯಲ್ಲಿ ಪ್ರತಿ ಚುನಾವಣೆಯೂ ಪ್ರತಿಷ್ಠೆಯ ಚುನಾವಣೆಯಾಗಲಿದೆ.
Related Articles
Advertisement
ಸಂಸದ ಆರ್.ಧ್ರುವನಾರಾಯಣ್ ಮಾತನಾಡಿ, ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಡಿಮೆ ಅವಧಿ ಇದೆ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಳೆದ ಬಾರಿ ಸ್ಪಷ್ಟ ಬಹುಮತ ನಮಗೆ ಸಿಗಲಿಲ್ಲ. ಈ ಬಾರಿ ಎಲ್ಲರೂ ಒಗ್ಗೂಡಿ ಕೆಲಸ ಮಾಡುವ ಮೂಲಕ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಜತೆಗೆ ವ್ಯಕ್ತಿಯೂ ಮುಖ್ಯವಾಗಲಿದ್ದು, ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ಅವಕಾಶ ಸಿಗದ ಸಮಾಜದವರಿಗೆ ಬೇರೆ ಸ್ಥಾನಮಾನ ನೀಡುವ ಅವಕಾಶ ನೀಡಬೇಕು. ಇದರಿಂದ ಪಕ್ಷದ ಏಳಿಗೆಗೆ ಸಹಕಾರಿಯಾಗಲಿದೆ. ಎಲ್ಲರೂ ಸಂಘಟಿತರಾಗಿ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ, ಸ್ಪಷ್ಟ ಬಹುಮತ ಪಡೆಯಲು ಶ್ರಮಿಸೋಣ ಎಂದರು.
ಶಾಕಸರಾದ ತನ್ವೀರ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಆರ್.ಧರ್ಮಸೇನಾ, ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ, ಎಂ.ಸತ್ಯನಾರಾಯಣ, ಮುಖಂಡರಾದ ಸಿ.ಎಚ್.ವಿಜಯಶಂಕರ್, ಆತ್ಮಾನಂದ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಇನ್ನಿತರ ಮುಖಂಡರು, ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳ ಅಭ್ಯರ್ಥಿಗಳು ಹಾಜರಿದ್ದರು.
ಭುಗಿಲೆದ್ದ ಅಸಮಾಧಾನ: ನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದ ಕೆಲವು ಆಕಾಂಕ್ಷಿಗಳು ಕೆಪಿಸಿಸಿ ಅಧ್ಯಕ್ಷರ ಎದುರಲ್ಲೇ ಅಸಮಾಧಾನ ಹೊರಹಾಕಿದರು. ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ, ಪಾಲಿಕೆ 22ನೇ ವಾರ್ಡಿನಿಂದ ತಮ್ಮ ಮಗಳಿಗೆ ಟಿಕೆಟ್ ಕೊಡಿಸುವ ನಿರೀಕ್ಷೆ ಹೊಂದಿದ್ದ ಚೌಹಳ್ಳಿ ಪುಟ್ಟಸ್ವಾಮಿ, ಈಶ್ಚರ್ ಚಕ್ಕಡಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಮಹಿಳಾ ಟಿಕೆಟ್ ಆಕಾಂಕ್ಷಿಯೊಬ್ಬರು ದಿನೇಶ್ ಗುಂಡೂರಾವ್ ಅವರ ಎದುರು ಕಣ್ಣೀರಿಟ್ಟು ತಮ್ಮ ಅಸಮಾಧಾನ ಹೊರ ಹಾಕಿದರು.