Advertisement

ಶಿವಗಂಗೆಯಲ್ಲಿ ಹಂತ-ಹಂತವಾಗಿ ಅಭಿವೃದ್ಧಿ: ಆನಂದ್‌ ಸಿಂಗ್‌

09:46 PM Mar 10, 2022 | Team Udayavani |

ವಿಧಾನಸಭೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿರುವ ಶಿವಗಂಗೆ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಂತ-ಹಂತವಾಗಿ ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹೇಳಿದರು.

Advertisement

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಡಾ.ಕೆ.ಶ್ರೀನಿವಾಸಮೂರ್ತಿ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಶಿವಗಂಗೆ ಕ್ಷೇತ್ರದಲ್ಲಿ ಇಲ್ಲಿವರೆಗೆ ಮೂರು ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಮುಂದಿನ ಹಂತದಲ್ಲಿ ಬೆಟ್ಟದ ಮೇಲೆ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸ್ಥಳೀಯ ಶಾಸಕರು, ಶಿವಗಂಗೆ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ 10 ಕೋಟಿ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಬೆಟ್ಟದ ಮೇಲೆ ರಸ್ತೆ ನಿರ್ಮಾಣ ಸೇರಿದಂತೆ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು.ಇಲಾಖೆಯಿಂದ ರಾಜ್ಯಾದ್ಯಂತ ಗುರುತಿಸಿರುವ 778 ಪ್ರವಾಸಿ ತಾಣಗಳಲ್ಲಿ ಶಿವಗಂಗೆ ಬೆಟ್ಟವನ್ನು ಗುರುತಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next