Advertisement

ಹಂತ ಹಂತವಾಗಿ ಪೊಲೀಸ್‌ ಹುದ್ದೆ ಭರ್ತಿ

06:00 AM Jul 11, 2018 | |

ವಿಧಾನಪರಿಷತ್ತು: ಪೊಲೀಸ್‌ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕೆ.ಪಿ.ನಂಜುಂಡಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರತಿ ವರ್ಷ 4ರಿಂದ 5 ಸಾವಿರ ಸಿಬ್ಬಂದಿ ನಿವೃತ್ತರಾಗುತ್ತಾರೆ. ಆಯಾ ವರ್ಷದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಆದರೆ, 2008ರಿಂದ 2013ರವರೆಗೆ
ಐದು ವರ್ಷದ ಅವಧಿಯಲ್ಲಿ ಯಾವುದೇ ನೇಮಕಾತಿಗಳು ನಡೆದಿಲ್ಲ. ಹಾಗಾಗಿ, ಸಾಕಷ್ಟು ಬ್ಯಾಕ್‌ಲಾಗ್‌ ಹುದ್ದೆಗಳು ಖಾಲಿ ಉಳಿದಿದ್ದವು. ಹಿಂದಿನ ಸರ್ಕಾರದ 5 ವರ್ಷಗಳಲ್ಲಿ 26 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ ಎಂದರು. 

Advertisement

2016-17 ಮತ್ತು 2017-18ನೇ ಸಾಲಿನ 12,139 ಹುದ್ದೆಗಳ ಭರ್ತಿಗೆ ಮಂಜೂರಾತಿ ಸಿಕ್ಕಿದೆ. ಆದರೆ, ಈ ಎಲ್ಲ ಹುದ್ದೆಗಳನ್ನು ಏಕಕಾಲಕ್ಕೆ ಭರ್ತಿ ಮಾಡಿಕೊಳ್ಳಲು ಆಗುವುದಿಲ್ಲ. ಏಕೆಂದರೆ ನಮ್ಮಲ್ಲಿರುವುದು 10 ಕಾಯಂ ಮತ್ತು 20 ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆಗಳು. ಒಂದೊಂದು ಶಾಲೆಯಲ್ಲಿ ಬಾರಿಗೆ ಗರಿಷ್ಠ 3ರಿಂದ 4 ಸಾವಿರ ಸಿಬ್ಬಂದಿಗೆ ತರಬೇತಿ ಕೊಡಬಹುದು. ತರಬೇತಿ ಶಾಲೆಗಳ ಲಭ್ಯತೆ ಮತ್ತು ಪರಿಸ್ಥಿತಿ ಆಧರಿಸಿ ನೇಮಕಾತಿ ಪ್ರಕ್ರಿಯೆ ನಡೆಸಬೇಕಾಗುತ್ತದೆ. ಅದರಂತೆ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next