Advertisement

Belagavi: ಯಶಸ್ವಿ ಮತ್ತು ರಚನಾತ್ಮಕ ಕಲಾಪ ನಡೆಸಲು ಕ್ರಮ: ಬಸವರಾಜ ಹೊರಟ್ಟಿ

05:45 PM Dec 07, 2024 | Team Udayavani |

ಬೆಳಗಾವಿ: ಚಳಿಗಾಲದ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಅನೇಕ ಸಲಹೆಗಳನ್ನು ನೀಡಲಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

Advertisement

ಬೆಳಗಾವಿಯಲ್ಲಿ ಶನಿವಾರ (ಡಿ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಚಿಂತನೆ ನಡೆಸಲು ಸಲಹೆ ನೀಡಲಾಗಿದೆ. ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸಲು ಕ್ರಮಕ್ಕೆ ಸೂಚಿಸಲಾಗಿದೆ. ಪರಿಷತ್ ಸದಸ್ಯರ ವೇದಿಕೆ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸರಕಾರಕ್ಕೆ ಸಲಹೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸದನದಲ್ಲಿ ರಚನಾತ್ಮಕ ಚರ್ಚೆಗೆ ಪರಿಷತ್ ಸದಸ್ಯರ ಜತೆ ಈಗಾಗಲೇ ಚರ್ಚಿಸಲಾಗಿದೆ ಎಂದರು.

ಯುಕೆಪಿ, ಮಹಾದಾಯಿ, ರೈತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ ಮಾಡಲಾಗುವುದು. ಮೊದಲ ವಾರ ಹಾಗೂ ಎರಡನೇ ವಾರದಲ್ಲಿ ಮಂಗಳವಾರ ಮತ್ತು ಬುಧವಾರ ದಿನಗಳಂದು ಉತ್ತರ ಕರ್ನಾಟಕ ವಿಷಯ ಚರ್ಚೆ ಮಾಡಲಾಗುವುದು. ಅಧಿವೇಶನ ನಡೆಸಲು ಈ ಬಾರಿ 20 ಕೋಟಿ ಅಂದಾಜಿಸಲಾಗಿದೆ. ಶಾಸಕರ ಭವನ ನಿರ್ಮಿಸಲು ಕೆಲವು ಪ್ರಸ್ತಾವನೆಗಳು ಬಂದಿವೆ. ಇವುಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ ಮಾಡಲಾಗುವುದು. ತಾಜ್ ಗ್ರೂಪ್, ಕೆ.ಎಲ್.ಇ. ಹೀಗೆ ಅನೇಕ ಸಂಸ್ಥೆಗಳು ಶಾಸಕರ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೊರಟ್ಟಿ ಹೇಳಿದರು.

ಬೆಳಗಾವಿ ವಿಭಜನೆ ಸಾಧಕ-ಬಾಧಕಗಳ ಬಗ್ಗೆ ಸರಕಾರದ ಹಂತದಲ್ಲಿ ಚರ್ಚೆಯಾಗಬೇಕಿದೆ. ಪರಿಷತ್ತಿನಲ್ಲಿ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ ಪ್ರಶ್ನೆಗಳನ್ನು ಸ್ವೀಕರಿಸಲಾಗಿದೆ. ಈ ಬಾರಿ 81 ಗಮನ ಸೆಳೆಯುವ ಸೂಚನೆಗಳು ಬಂದಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next