ಮುಂಬೈ: ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದಲೂ ಪ್ಯಾಟ್ ಕಮಿನ್ಸ್ ತಪ್ಪಿಸಿಕೊಂಡಿದ್ದು, ಸ್ಟೀವ್ ಸ್ಮಿತ್ ಅವರು ಆಸ್ಟ್ರೇಲಿಯಾವನ್ನು ಮುನ್ನಡೆಸಲಿದ್ದಾರೆ.
ಕಮಿನ್ಸ್ ತನ್ನ ಅಸ್ವಸ್ಥ ತಾಯಿಯೊಂದಿಗೆ ಇರಲು ಸರಣಿಯ ಎರಡನೇ ಟೆಸ್ಟ್ ನಂತರ ಆಸ್ಟ್ರೇಲಿಯಾಕ್ಕೆ ಹಿಂತಿರುಗಿದ್ದರು, ನಂತರ ಕಮಿನ್ಸ್ ತಾಯಿ ನಿಧನರಾದರು. ಪ್ಯಾಟ್ ಕಮಿನ್ಸ್ ಅವರು ಆಸ್ಟ್ರೇಲಿಯಾದಲ್ಲೇ ಉಳಿದುಕೊಂಡಿದ್ದಾರೆ.
ಕಮಿನ್ಸ್ ಅನುಪಸ್ಥಿತಿಯಲ್ಲಿ ಟೆಸ್ಟ್ ಪಂದ್ಯಗಳನ್ನು ಮುನ್ನಡೆಸಿದ್ದ ಸ್ಮಿತ್ ಮತ್ತೆ ತಂಡವನ್ನು ಮುನ್ನಡೆಸಲಿದ್ದಾರೆ. ಕಮಿನ್ಸ್ ಗೆ ಯಾವುದೇ ಬದಲಿ ಆಟಗಾರನನ್ನು ಹೆಸರಿಲ್ಲ. ತಂಡವು ಈಗಾಗಲೇ ಗಾಯಗೊಂಡಿರುವ ಜೋಶ್ ಹ್ಯಾಜಲ್‌ವುಡ್ ಮತ್ತು ಜೇ ರಿಚರ್ಡ್‌ಸನ್ ಅವರ ಸೇವೆಯನ್ನು ಕಳೆದುಕೊಂಡಿದೆ.
ಇದನ್ನೂ ಓದಿ:ಉರಿಗೌಡ, ನಂಜೇಗೌಡ ದ್ವಾರ ವಿವಾದ; ಡಿಜಿಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲು ಡಿಕೆಶಿ ಆಗ್ರಹ
ಇತ್ತೀಚೆಗಷ್ಟೇ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ಡೇವಿಡ್ ವಾರ್ನರ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮಿಚೆಲ್ ಮಾರ್ಷ್ ಅವರು ಆಸ್ಟ್ರೇಲಿಯಾ ತಂಡಕ್ಕೆ ಮರಳಿದ್ದಾರೆ.
ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾ), ಅಲೆಕ್ಸ್ ಕ್ಯಾರಿ (ವಿ.ಕೀ), ಸೀನ್ ಅಬಾಟ್, ಆಷ್ಟನ್ ಅಗರ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋಯಿನಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.