Advertisement

ಇನ್ನೂ 1,508 ಜನರ ವರದಿ ಬಾಕಿ

03:17 PM May 27, 2020 | Suhan S |

ಬೆಳಗಾವಿ: ಕೋವಿಡ್ ವಿರುದ್ಧ ಹೋರಾಡುತ್ತಿರುವ ಬೆಳಗಾವಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 13 ಹೊಸ ಪ್ರಕರಣಗಳು ದೃಢವಾಗಿದ್ದು, ಇನ್ನೂ 1,508 ಜನರ ಗಂಟಲು ದ್ರವ ಮಾದರಿ ವರದಿ ಬರುವುದು ಬಾಕಿ ಇದೆ.

Advertisement

ಸೋಂಕಿನಿಂದ ಒಟ್ಟು 94 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌ -19 ಆಸ್ಪತ್ರೆಯಲ್ಲಿ 48 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 11,037 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 2,989 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 3,603 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 4,397 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 9,741 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 7,934 ಜನರ ವರದಿ ನಕಾರಾತ್ಮಕವಾಗಿದೆ.

ಒಟ್ಟು 1,508 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಕ್ಯೆ 143 ಆಗಿದ್ದು, ಅದಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ. ಹಿರೇಬಾಗೇವಾಡಿಯ ವೃದ್ಧೆ ಕೋವಿಡ್‌ದಿಂದ ಮೃತಪಟ್ಟಿದ್ದಾಳೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ವೈದ್ಯಕೀಯ ವರದಿ ತಿಳಿಸಿದೆ. ಜಿಲ್ಲೆಯಲ್ಲಿ ಕೋವಿಡ್ ಹಾಟ್‌ಸ್ಪಾಟ್‌ ಎಂದು ಖ್ಯಾತಿ ಪಡೆದಿದ್ದ ರಾಯಬಾಗ ತಾಲೂಕಿನ ಕುಡಚಿ ನಗರ ಪ್ರದೇಶದಲ್ಲಿ ಸೋಂಕಿತರು ಗುಣಮುಖರಾಗಿದ್ದರಿಂದ ಇಡೀ ನಗರ ಪ್ರದೇಶವನ್ನು ಡಿನೋಟಿಫೆ„ ಮಾಡಿ ಜಿಲ್ಲಾಧಿ ಕಾರಿಗಳು ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next