Advertisement

ಜನತೆ ನನಗೆ ಸೋತು ಗೆದ್ದಿರುವವರು ಎಂದು ಸರ್ಟಿಫಿಕೇಟ್ ನೀಡಿದ್ದಾರೆ: ಸತೀಶ್ ಜಾರಕಿಹೊಳಿ

04:04 PM May 04, 2021 | Team Udayavani |

ಬೆಳಗಾವಿ:  ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಚುನಾವಣೆ ಆಯೋಗ  ಗೆದ್ದಿರುವ ಸರ್ಟಿಫಿಕೇಟ್  ನೀಡಿರಬಹುದು. ಆದರೆ, ರಾಜ್ಯದ ಜನತೆ  ನಮಗೆ  ಸೋತು ಗೆದ್ದವರು ಎಂಬ ಸರ್ಟಿಫಿಕೇಟ್ ನೀಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬೆಳಗಾವಿ ಲೋಕಸಭಾ ಚುನಾವಣೆಯ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು.

Advertisement

ನಗರದ ಕಾಂಗ್ರೆಸ್  ಸಭಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  ನಾವು ಸೋತಿದ್ದರೂ ತೀವ್ರ ಪೈಪೋಟಿ ಕೊಟ್ಟಿದ್ದೇವೆ. ಸ್ವತಃ ಬಿಜೆ ಪಿ ನಾಯಕರೆ ಇದನ್ನು ಒಪ್ಪಿಕೊಂಡಿದ್ದಾರೆ  ನಮ್ಮ ಜನರು ನನ್ನನ್ನು ಗೆಲುವಿನ ದಡ ಸೇರಿಸಿದ್ದಾರೆ.  ಬಿಜೆಪಿಗೆ ನಮ್ಮ ಶಕ್ತಿ ಎನು ಎಂಬುದನ್ನು ಈ ಚುನಾವಣೆ ಮೂಲಕ ತೋರಿಸಿದ್ದೆವೆ ಎಂದರು.

ಜನತೆಯ ವಿಶ್ವಾಸಕ್ಕೆ ಸ್ವಲ್ಪ ಹಿನ್ನಡೆಯಾಗಿದೆ. ಚುನಾವಣೆ ಸೋತಿರಬಹುದು ಆದರೆ, ಪಕ್ಷಕ್ಕೆ ಬಹಳಷ್ಟು ಲಾಭವಾಗಿದೆ. ರಾಜ್ಯದ ಜನತೆಯ  ಚಿತ್ತ ಬೆಳಗಾವಿ ಚುನಾವಣೆ ಮೇಲೆ ನೆಟ್ಟಿತ್ತು ಅಷ್ಟು ಸಾಕು. ಮುಂದಿನ ಚುನಾವಣೆಗೆ   ಈ   ಫಲಿತಾಂಶ ದಿಕ್ಸೂಚಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಕೋವಿಡ್ ಲಸಿಕೆ ಪಡೆದರೆ ಮಕ್ಕಳಾಗಲ್ಲ ಎಂದು ಅಪಪ್ರಚಾರ ಮಾಡಿದ್ದರು : ಸಿ.ಟಿ ರವಿ

ಈ ಚುನಾವಣೆಯಲ್ಲಿ ನಾವು ಸೋತರೂ,  ನಾವೇ ಗೆದ್ದಿದ್ದೇವೆ.‌ ತಾಂತ್ರಿಕವಾಗಿ  ಚುನಾವಣೆ ಸೊತಿದ್ದೇವೆ ಅಷ್ಟೇ. ನಮ್ಮ ಎಲ್ಲ ಶಾಸಕರು ಮಾಜಿ ಶಾಸಕರು ನಮ್ಮ ಪರವಾಗಿ ಉತ್ತಮ ಕೆಲಸ ಮಾಡಿದ್ದಾರೆ. ವಿಷೇಶವಾಗಿ ಈ ಚುನಾವಣೆಯಲ್ಲಿ ಸ್ವಯಂ ಪ್ರೇರಣೆಯಿಂದ ಜನರು ನಮ್ಮ ಪರ ಪ್ರಚಾರ ಮಾಡಿದ್ದಾರೆ ಎಂದು ಸತೀಶ ಜಾರಕಿಹೊಳಿ ಹೇಳಿದರು.

Advertisement

ನನ್ನ 30 ವರ್ಷಗಳ ರಾಜಕೀಯಲ್ಲಿ ಮೊದಲ ಬಾರಿಗೆ ತೀವ್ರ ಕುತೂಹಲ ಮೂಡಿಸಿದ ಫಲಿತಾಂಶ ಇದಾಗಿದೆ.  ಅಲ್ಪ ಹಿನ್ನೆಡೆಯಾಗಿದೆ. ಆದರೆ ಕಾಂಗ್ರೆಸ್ ಪ್ರಭಾವ  ಬಿಜೆಪಿಗೆ ಅರಿವಾಗಿದೆ ಎಂದರು.

ಗೋಕಾಕ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿರುವ ವಿಚಾರವಾಗಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪೈಟ್ ಮಾಡುವ ಅವಕಾಶವಿದೆ. ರಾಜ್ಯದ ರಾಜಕಾರಣಕ್ಕೆ ಗೋಕಾಕ ರಾಜಕಾರಣವನ್ನು ಹೋಲಿಸಲು ಸಾಧ್ಯವಿಲ್ಲ. ಈ ಕ್ಷೇತ್ರದಲ್ಲಿ ನಮಗೆ ಬರಬೇಕಾದ ಮತಗಳು ಬಂದಿದೆ.  ಬೆಳಗಾವಿ ದಕ್ಷಿಣ ಹಾಗೂ ಗ್ರಾಮೀಣ ಕ್ಷೇತ್ರದಲ್ಲಿ ತಪ್ಪಿದೆ. ಇದರ ಬಗ್ಗೆ ಪರಿಶೀಲಿಸಲಾಗುವದು ಎಂದರು.

ಕೋವಿಡ್ ವಿಚಾರವಾಗಿ ಮಾತನಾಡಿದ ಅವರು,  24 ಮಂದಿ ಸಾವಿಗೆ ಸರ್ಕಾರವೇ ನೇರ ಹೊಣೆ. ಜನರನ್ನು ರಕ್ಷಿಸುವಲ್ಲಿ ಸರ್ಕಾರ ಎಡವಿದೆ ಎಂದು ಟೀಕಾ ಪ್ರಹಾರ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next