Advertisement

400ಕ್ಕೂ ಅಧಿಕ ಅಂಕ ಕುಸಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್; ನಿಫ್ಟಿಯೂ ಇಳಿಕೆ

10:53 AM Jun 22, 2022 | Team Udayavani |

ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಬುಧವಾರ (ಜೂನ್ 22) ಬಾಂಬೆ ಷೇರುಪೇಟೆಯಲ್ಲಿ ಆರಂಭಿಕ ಹಂತದಲ್ಲಿಯೇ 400ಕ್ಕೂ ಅಧಿಕ ಇಳಿಕೆಯೊಂದಿಗೆ ವಹಿವಾಟು ಮುಂದುವರಿದಿದೆ.

Advertisement

ಇದನ್ನೂ ಓದಿ:ಸಿಎಂ ಉದ್ಧವ್ ವಿರುದ್ಧ ಬಂಡಾಯ – ನನಗೆ 46 ಶಾಸಕರ ಬೆಂಬಲ ಇದೆ: ಏಕನಾಥ ಶಿಂಧೆ

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 418.07 ಅಂಕ ಇಳಿಕೆಯಾಗಿದ್ದು, 52,114 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 131.1 ಅಂಕ ಕುಸಿತಗೊಂಡಿದ್ದು, 15,507.70 ಅಂಕಗಳಲ್ಲಿ ವಹಿವಾಟು ನಡೆಯುತ್ತಿದೆ.

ಸೆನ್ಸೆಕ್ಸ್ ಇಳಿಕೆಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಚ್ ಡಿಎಫ್ ಸಿ ಬ್ಯಾಂಕ್, ಹೌಸಿಂಗ್ ಡೆವಲಪ್ ಮೆಂಟ್ ಫೈನಾನ್ಸ್ ಕಾರ್ಪೋರೇಶನ್, ಎಲ್ ಆ್ಯಂಡ್ ಟಿ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ನಷ್ಟ ಕಂಡಿದೆ.

ಮತ್ತೊಂದೆಡೆ ಹೀರೋ ಮೋಟೊ ಕಾರ್ಪ್ ಲಿಮಿಟೆಡ್, ಟಿಸಿಎಸ್, ಬಜಾಜ್ ಆಟೋ ಲಿಮಿಟೆಡ್, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್, ಇನ್ಫೋಸಿಸ್ ಲಿಮಿಟೆಡ್ ಷೇರುಗಳು ಲಾಭಗಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next