ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ್ದು, ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿದ ಪರಿಣಾಮ ಶುಕ್ರವಾರ(ಜೂನ್ 04) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 132 ಅಂಕಗಳಷ್ಟು ಕುಸಿತ ಕಂಡಿದೆ.
ಇದನ್ನೂ ಓದಿ:ಒಂದು ನಿಜ ಹೇಳ್ಲಾ..? ‘ಮನಸ್ಸು’ ನಿಮ್ಮ ಅತ್ಯಾಪ್ತ ಸ್ನೇಹಿತ ಅಂತ ನಿಮಗೆ ಗೊತ್ತೇ ಇಲ್ಲ..!
ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ 132.38 ಅಂಕಗಳಷ್ಟು ಇಳಿಕೆಯಾಗಿದ್ದು, 52,100.05 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 20.10 ಅಂಕಗಳಷ್ಟು ಇಳಿಕೆಯಾಗಿದ್ದು, 15,670.25ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿದೆ.
ಸೆನ್ಸೆಕ್ಸ್ ಇಳಿಕೆಯಿಂದ ನೆಸ್ಲೆ ಇಂಡಿಯಾ, ಎಸ್ ಬಿಐ, ಎಚ್ ಡಿಎಫ್ ಸಿ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಎಚ್ ಯುಎಲ್ ಮತ್ತು ಡಾ.ರೆಡ್ಡೀಸ್ ಷೇರುಗಳು ನಷ್ಟ ಅನುಭವಿಸಿದೆ. ಏತನ್ಮಧ್ಯೆ ಬಜಾಜ್ ಫಿನ್ ಸರ್ವ್, ಒಎನ್ ಜಿಸಿ, ಎಲ್ ಆ್ಯಂಡ್ ಟಿ, ಬಜಾಜ್ ಫೈನಾನ್ಸ್ ಮತ್ತು ಎಚ್ ಡಿಎಫ್ ಸಿ ಷೇರುಗಳು ಲಾಭಗಳಿಸಿದೆ.
ಮುಂಬಯಿ ಷೇರುಪೇಟೆಯ ಬೆಳಗ್ಗಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆ ಕಂಡಿದ್ದವು. ನಂತರ ಆರ್ ಬಿಐ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ನಂತರ ಹೂಡಿಕೆದಾರರು ಬ್ಯಾಂಕಿಂಗ್ ಷೇರುಗಳ ಲಾಭದತ್ತ ಮುಖಮಾಡಿದ್ದರಿಂದ ಸೆನ್ಸೆಕ್ಸ್ ಇಳಿಕೆಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.