ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಪಾಸಿಟಿವ್ ಟ್ರೆಂಡ್ ಪರಿಣಾಮ ಸೋಮವಾರ (ಜನವರಿ 03) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಬರೋಬ್ಬರಿ 929 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಗೋವಾದಲ್ಲಿ ಜ. 4 ರಿಂದ ಜ. 26 ರ ವರೆಗೆ ಆಫ್‍ಲೈನ್ ತರಗತಿಗಳು ಬಂದ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 929.40ಅಂಕಗಳಷ್ಟು ಏರಿಕೆಯಾಗಿದ್ದು, 59,183.22 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 271.70 ಅಂಕಗಳಷ್ಟು ಏರಿಕೆಯೊಂದಿಗೆ 17,625.70 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಮಧ್ಯಾಹ್ನದ ವೇಳೆ ಮುಂಬಯಿ ಷೇರುಪೇಟೆಯ ವಹಿವಾಟಿನಲ್ಲಿ ಸೆನ್ಸೆಕ್ಸ್ 700ಕ್ಕೂ ಅಧಿಕ ಅಂಕಗಷ್ಟು ಏರಿಕೆಯೊಂದಿಗೆ 59,032.50 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಎನ್ ಎಸ್ ಇ ನಿಫ್ಟಿ 200ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯಾಗಿದ್ದು, 17,579.20 ಅಂಕಗಳಲ್ಲಿ ವಹಿವಾಟು ಮುಂದುವರಿದಿತ್ತು.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಬಜಾಜ್ ಫಿನ್ ಸರ್ವ್, ಬಜಾಜ್ ಫೈನಾನ್ಸ್, ಐಸಿಐಸಿಐ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಲಾಭಗಳಿಸಿದ್ದು, ಮತ್ತೊಂದೆಡೆ ಡಾ.ರೆಡ್ಡೀಸ್, ಮಹೀಂದ್ರ ಆ್ಯಂಡ್ ಮಹೀಂದ್ರ, ಟೆಕ್ ಮಹೀಂದ್ರ, ನೆಸ್ಲೆ ಇಂಡಿಯಾ ಷೇರುಗಳು ನಷ್ಟ ಕಂಡಿದೆ.