Advertisement

ಬೆಳಗ್ಗೆ ಸಾರ್ವಕಾಲಿಕ ದಾಖಲೆ ಬರೆದಿದ್ದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 163 ಅಂಕ ಕುಸಿತ!

05:33 PM Aug 18, 2021 | Team Udayavani |

ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಬುಧವಾರ (ಆಗಸ್ಟ್ 18) ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 163 ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.

Advertisement

ಇದನ್ನೂ ಓದಿ:ISI ಸೂತ್ರಧಾರಿ! ತಾಲಿಬಾನ್ ನಿಂದ ಅಫ್ಘಾನ್ ಕೈವಶ…ಪಾಕ್ ನ ಲಷ್ಕರ್, ಜೈಶ್ ಉಗ್ರರಿಂದ ಲೂಟಿ

ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 56,118.57 ಅಂಕಗಳೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿತ್ತು. ಮಧ್ಯಾಹ್ನದ ವಹಿವಾಟಿನಲ್ಲಿ 162.78 ಅಂಕ ಕುಸಿತದೊಂದಿಗೆ 55,629.49 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ.

ಇದೇ ರೀತಿ ಎನ್ ಎಸ್ ಇ ನಿಫ್ಟಿ 45.75 ಅಂಕಗಳಷ್ಟು ಕುಸಿತದೊಂದಿಗೆ 16,568.85 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ. ನಿಫ್ಟಿಯೂ ಕೂಡಾ ಮಧ್ಯಂತರ ವಹಿವಾಟಿನ ವೇಳೆ 16,701.85 ಅಂಕಗಳ ದಾಖಲೆ ಮಟ್ಟಕ್ಕೆ ತಲುಪಿತ್ತು.

ಸೆನ್ಸೆಕ್ಸ್, ನಿಫ್ಟಿ ಕುಸಿತದಿಂದ ಕೋಟಕ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಪವರ್ ಗ್ರಿಡ್, ಎಚ್ ಡಿಎಫ್ ಸಿ, ಇಂಡಸ್ ಇಂಡ್ ಬ್ಯಾಂಕ್ ಮತ್ತು ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ. ಇನ್ನು ಆಲ್ಟ್ರಾ ಟೆಕ್ ಸಿಮೆಂಟ್, ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ನೆಸ್ಲೆ ಇಂಡಿಯಾ ಮತ್ತು ಬಜಾಜ್ ಆಟೋ ಷೇರುಗಳು ಲಾಭ ಗಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next