ಮುಂಬಯಿ: ಒಮಿಕ್ರಾನ್ ಸೋಂಕು ಹೆಚ್ಚಳದಿಂದ ಜಾಗತಿಕ ಆರ್ಥಿಕ ಪ್ರಗತಿ ಮೇಲೆ ಪರಿಣಾಮ ಬೀರಲಿದೆ ಎಂಬ ಭೀತಿ ಹೂಡಿಕೆದಾರರಲ್ಲಿ ಮೂಡಿದ ಪರಿಣಾಮ ಗುರುವಾರ(ಜನವರಿ 06) ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 600ಕ್ಕೂ ಅಧಿಕ ಅಂಕಗಳಷ್ಟು ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ರಸ್ತೆಯಲ್ಲಿ ಸಿಕ್ಕಿದ ಹತ್ತು ಸಾವಿರ ಹಣ ಮರಳಿಸಿ ವಿದ್ಯಾರ್ಥಿನಿಯರ ಪ್ರಾಮಾಣಿಕತೆ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 621.31 ಅಂಕಗಳಷ್ಟು ಕುಸಿತಗೊಂಡಿದ್ದು, 59,601.84 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 179.40 ಅಂಕಗಳಷ್ಟು ಇಳಿಕೆಯಾಗಿದ್ದು, 17,745.90 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಜೆಎಸ್ ಡಬ್ಲ್ಯು ಸ್ಟೀಲ್, ಆಲ್ಟ್ರಾಟೆಕ್ ಸಿಮೆಂಟ್, ಟೆಕ್ ಮಹೀಂದ್ರ, ಶ್ರೀಸಿಮೆಂಟ್ಸ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಯುಪಿಎಲ್, ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಆಟೋ, ಭಾರ್ತಿ ಏರ್ ಟೆಲ್, ಈಚರ್ ಮೋಟಾರ್ಸ್ ಷೇರುಗಳು ಲಾಭಗಳಿಸಿದೆ.
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಇಂದು ಬೆಳಗ್ಗೆ 872.80 ಅಂಕಗಳಷ್ಟು ಕುಸಿತಗೊಂಡಿದ್ದು, 59,350.35 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 253.70 ಅಂಕಗಳಷ್ಟು ಇಳಿಕೆಯಾಗಿದ್ದು, 17,671.60 ಅಂಕಗಳ ಮಟ್ಟಕ್ಕೆ ಕುಸಿದಿತ್ತು.