ಮುಂಬಯಿ: ದೇಶದಲ್ಲಿ ಕೋವಿಡ್ ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಕಳವಳದ ಹಿನ್ನೆಲೆಯಲ್ಲಿ ಸೋಮವಾರ(ಡಿಸೆಂಬರ್ 06) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಹಾಗೂ ನಿಫ್ಟಿ ಭಾರೀ ಇಳಿಕೆ ಕಂಡಿದ್ದು, ಹೂಡಿಕೆದಾರರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಇದನ್ನೂ ಓದಿ:ಲಕ್ನೋದಲ್ಲಿ AK-203 ರೈಫಲ್ಸ್ ಉತ್ಪಾದನೆ:ಭಾರತ-ರಷ್ಯಾ 5 ಸಾವಿರ ಕೋಟಿ ರೂ. ಒಪ್ಪಂದಕ್ಕೆ ಸಹಿ
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ ಬರೋಬ್ಬರಿ 949.32 ಅಂಕಗಳಷ್ಟು ಕುಸಿತಗೊಂಡಿದ್ದು, 56,747.14 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 284.40 ಅಂಕ ಇಳಿಕೆಯಾಗಿದ್ದು, 16,912.30 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಕೋಲ್ ಇಂಡಿಯಾ, ಇಂಡಸ್ ಇಂಡ್ ಬ್ಯಾಂಕ್, ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ಬಜಾಜ್ ಫಿನ್ ಸರ್ವ್, ಎಚ್ ಸಿಎಲ್ ಟೆಕ್ನಾಲಜೀಸ್ ಷೇರುಗಳು ನಷ್ಟ ಕಂಡಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 311.11 ಅಂಕ ಇಳಿಕೆಯಾಗಿದ್ದು, 57,385.35 ಅಂಕದೊಂದಿಗೆ ಆರಂಭಿಕ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 81.70 ಅಂಕ ಕುಸಿತವಾಗಿದ್ದು, 17,115 ಅಂಕಗಳ ಗಡಿ ತಲುಪಿತ್ತು.