ಮುಂಬಯಿ: ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮಂಗಳವಾರ(ಆಗಸ್ಟ್ 10) 152 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:ನಾನು ರಾಜಕಾರಣ ಮಾಡೋಕೆ ಬಂದವನು, ಕಬ್ಬನ್ ಪಾರ್ಕ್ ನೋಡೋಕೆ ಬಂದಿಲ್ಲ: ಪ್ರೀತಂ ಗೌಡ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 152 ಅಂಕ ಏರಿಕೆಯೊಂದಿಗೆ 54,554.66 ಅಂಕಗಳ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಇದೇ ರೀತಿ ಎನ್ ಎಸ್ ಇ ನಿಫ್ಟಿ 22 ಅಂಕ ಏರಿಕೆಯೊಂದಿಗೆ 16,280 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಟೆಕ್ ಮಹೀಂದ್ರಾ, ಎಚ್ ಡಿಎಫ್ ಸಿ, ಕೋಟಕ್ ಮಹೀಂದ್ರಾ ಬ್ಯಾಂಕ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ ಷೇರುಗಳು ಲಾಭಗಳಿಸಿದೆ. ಅಲ್ಲದೇ ಟಾಟಾ ಸ್ಟೀಲ್, ಪವರ್ ಗ್ರಿಡ್, ಎನ್ ಟಿಪಿಸಿ, ಐಟಿಸಿ, ಬಜಾಜ್ ಆಟೋ, ಎಸ್ ಬಿಐ ಷೇರುಗಳು ನಷ್ಟ ಕಂಡಿದೆ.
ಮಂಗಳವಾರ ಬೆಳಗ್ಗೆ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 257.31 ಅಂಕ ಮುನ್ನಡೆಯೊಂದಿಗೆ 54,660.16 ಅಂಕಗಳ ದಾಖಲೆಯ ಮಟ್ಟದಲ್ಲಿ ಆರಂಭಿಕ ವಹಿವಾಟು ನಡೆಸಿತ್ತು. ಇದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 64.05 ಅಂಕ ಏರಿಕೆಯೊಂದಿಗೆ 16,322.30 ಅಂಕಗಳ ಮಟ್ಟದಲ್ಲಿ ವಹಿವಾಟು ಆರಂಭಿಸಿತ್ತು.