ಮುಂಬೈ: ಕೇಂದ್ರ ಸರ್ಕಾರ ಬುಧವಾರ (ಫೆ.01) 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಾಂಬೆ ಷೇರು ಮಾರುಕಟ್ಟೆ ವಹಿವಾಟು ಏರಿಕೆ ಇಳಿಕೆ ಕಂಡಿದ್ದು, ಅಂತಿಮವಾಗಿ 158 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 158.18 ಅಂಕಗಳಷ್ಟು ಏರಿಕೆಯೊಂದಿಗೆ 59,708.08 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 45.90 ಅಂಕಗಳಷ್ಟು ಇಳಿಕೆಯಾಗಿದ್ದು, 17,616.30 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಐಟಿಸಿ, ಐಸಿಐಸಿಐ ಬ್ಯಾಂಕ್, ಜೆಡಸ್ ಡಬ್ಲ್ಯು ಸ್ಟೀಲ್ ಮತ್ತು ಟಾಟಾ ಕನ್ಸುಮರ್ ಪ್ರಾಡಕ್ಟ್ಸ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಅದಾನಿ ಎಂಟರ್ ಪ್ರೈಸಸ್, ಅದಾನಿ ಪೋರ್ಟ್ಸ್, ಎಚ್ ಡಿಎಫ್ ಸಿ ಲೈಫ್, ಎಸ್ ಬಿಐ ಲೈಫ್ ಇನ್ಸೂರೆನ್ಸ್ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳು ನಷ್ಟ ಕಂಡಿದೆ.
ಇನ್ನು ಮೆಟಲ್, ಪಿಎಸ್ ಯು ಬ್ಯಾಂಕ್, ಇಂಧನ ಮತ್ತು ಗ್ಯಾಸ್ ಸೆಕ್ಟರ್ ಗಳ ಷೇರುಗಳು ಶೇ.1.5ರಷ್ಟು ನಷ್ಟ ಕಂಡಿದ್ದು, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಷೇರುಗಳು ಶೇ.1ರಷ್ಟು ಲಾಭಗಳಿಸಿದೆ.