ಮುಂಬಯಿ; ಜಾಗತಿಕ ಷೇರುಮಾರುಕಟ್ಟೆಯ ನೆಗೆಟಿವ್ ಟ್ರೆಂಡ್ ಪರಿಣಾಮ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 166.33 ಅಂಕಗಳಷ್ಟು ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಟಿಎಂಸಿ ಬಹುಸಂಸ್ಕೃತಿ ಮತ್ತು ಬಹುಧರ್ಮೀಯ ರಾಜ್ಯವನ್ನು ಬೆಂಬಲಿಸುವ ಪಕ್ಷ: ಮಮತಾ ಬ್ಯಾನರ್ಜಿ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 166.33 ಅಂಕ ಕುಸಿತಗೊಂಡಿದ್ದು, 58,117.09 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 43.40ಅಂಕ ಇಳಿಕೆಯೊಂದಿಗೆ 17,324.90 ಅಂಕದೊಂದಿಗೆ ವಹಿವಾಟು ಅಂತ್ಯಗೊಂಡಿದೆ.
ಪವರ್ ಗ್ರಿಡ್, ನೆಸ್ಲೆ ಇಂಡಿಯಾ, ಆ್ಯಕ್ಸಿಸ್ ಬ್ಯಾಂಕ್, ಡಾ.ರೆಡ್ಡೀಸ್ ಲ್ಯಾಬ್ ಷೇರುಗಳು ಲಾಭಗಳಿಸಿದೆ. ಐಟಿಸಿ, ಬಜಾಜ್ ಫೈನಾನ್ಸ್, ಕೋಟಕ್ ಮಹೀಂದ್ರ ಬ್ಯಾಂಕ್, ಭಾರ್ತಿ ಏರ್ ಟೆಲ್, ಆಟೋ, ಪಿಎಸ್ ಯು ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ.
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮಧ್ಯಂತರ ವಹಿವಾಟಿನ ವೇಳೆ 500ಕ್ಕೂ ಅಧಿಕ ಅಂಕಗಳಷ್ಟು ಏರಿಕೆ ಕಂಡಿದ್ದು, ದಿನಾಂತ್ಯಕ್ಕೆ 166 ಅಂಕಗಳಷ್ಟು ಕುಸಿತದೊಂದಿಗೆ ವಹಿವಾಟು ಕೊನೆಗೊಳಿಸಿದೆ.