ಮುಂಬಯಿ:ಜಾಗತಿಕ ಷೇರುಮಾರುಕಟ್ಟೆಯ ಭರ್ಜರಿ ವಹಿವಾಟಿನ ಪರಿಣಾಮ ಗುರುವಾರ (ಮೇ 26) ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಇದರೊಂದಿಗೆ ಕಳೆದ ಮೂರು ದಿನಗಳಿಂದ ಏರಿಳಿಕೆ ಕಂಡಿದ್ದ ಷೇರುಪೇಟೆ ಸೆನ್ಸೆಕ್ಸ್ ಮತ್ತೆ ಏರಿಕೆ ಕಂಡಂತಾಗಿದೆ.
ಇದನ್ನೂ ಓದಿ:ಸಿಕ್ಕ ಸಿಕ್ಕವರನ್ನು ಬೈಯುವ,ಭಿಕ್ಷೆ ಬೇಡುವ ಆದಿವಾಸಿಗಳ ವಿಶಿಷ್ಟವಾದ ಹಬ್ಬ!!
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 503.27ಅಂಕಗಳಷ್ಟು ಏರಿಕೆಯಾಗಿದ್ದು, 54,252.53 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 144.35ಅಂಕ ಏರಿಕೆಯಾಗಿದ್ದು, 16,170.15 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಟಾಟಾಸ್ಟೀಲ್ ಷೇರುಗಳ ಮೌಲ್ಯ ಶೇ.5.27ರಷ್ಟು ಏರಿಕೆ ಕಂಡಿದೆ. ಇನ್ನುಳಿದಂತೆ ಎಸ್ ಬಿಐ, ಎಚ್ ಡಿಎಫ್ ಸಿ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ನೆಸ್ಲೆ ಇಂಡಿಯಾ, ಎಚ್ ಡಿಎಫ್ ಸಿ, ಐಸಿಐಸಿಐ ಬ್ಯಾಂಕ್, ಟಿಸಿಎಸ್ ಮತ್ತು ವಿಪ್ರೋ ಷೇರುಗಳು ಲಾಭಗಳಿಸಿದೆ.
ಮತ್ತೊಂದೆಡೆ ಸನ್ ಫಾರ್ಮಾ, ರಿಲಯನ್ಸ್ ಇಂಡಸ್ಟ್ರೀಸ್, ಹಿಂದೂಸ್ತಾನ್ ಯೂನಿಲಿವರ್, ಎಲ್ ಆ್ಯಂಡ್ ಟಿ, ಡಾ.ರೆಡ್ಡೀಸ್, ಮತ್ತು ಬಜಾಜ್ ಫೈನಾನ್ಸ್ ಷೇರುಗಳ ಮೌಲ್ಯ ಶೇ.1.16ರಷ್ಟು ನಷ್ಟ ಕಂಡಿದೆ. ಬಡ್ಡಿ ದರದ ನೀತಿಯನ್ನು ಕಠಿಣಗೊಳಿಸುವುದಾಗಿ ಅಮೆರಿಕದ ಫೆಡರಲ್ ರಿಸರ್ವ್ ಖಚಿತಪಡಿಸಿದ ನಂತರವೂ ಜಾಗತಿಕ ಷೇರುಮಾರುಕಟ್ಟೆಯಲ್ಲಿನ ವಹಿವಾಟು ಭರ್ಜರಿಯಾಗಿ ನಡೆದಿತ್ತು.