ಮುಂಬಯಿ:ಜಾಗತಿಕ ಷೇರುಪೇಟೆಯ ಧನಾತ್ಮಕ ವಹಿವಾಟಿನ ನಡುವೆಯೇ ಗುರುವಾರ(ಅಕ್ಟೋಬರ್ 14) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಇದೇ ಮೊದಲ ಬಾರಿಗೆ 61 ಸಾವಿರ ಗಡಿ ದಾಟುವ ಮೂಲಕ ಸಾರ್ವಕಾಲಿಕ ಗರಿಷ್ಠ ದಾಖಲೆಯನ್ನು ಬರೆದಿದೆ.
ಇದನ್ನೂ ಓದಿ:ಈ ಬಾರಿ ದಸರಾ ಜಂಬೂಸವಾರಿಯಲ್ಲಿ 5 ಆನೆಗಳಿಗೆ ಮಾತ್ರ ಅವಕಾಶ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 300ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ 61,000 ಅಂಕಗಳೊಂದಿಗೆ ದಾಖಲೆಯ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 18,200 ಅಂಕಗಳಲ್ಲಿ ದಾಖಲೆಯ ವಹಿವಾಟಿಗೆ ಸಾಕ್ಷಿಯಾಗಿದೆ.
ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆಯ ಪರಿಣಾಮ ಇನ್ಫೋಸಿಸ್, ಟೆಕ್ ಮಹೀಂದ್ರ, ಐಟಿಸಿ, ಎಲ್ ಆ್ಯಂಡ್ ಟಿ, ಎನ್ ಟಿಪಿಸಿ, ಟಾಟಾ ಸ್ಟೀಲ್, ಮಾರುತಿ ಸುಜುಕಿ, ಎಚ್ ಸಿಎಲ್ ಟೆಕ್, ಆಲ್ಟ್ರಾ ಟೆಕ್ ಸಿಮೆಂಟ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಷೇರುಗಳು ಲಾಭಗಳಿಸಿದೆ.
ಮತ್ತೊಂದೆಡೆ ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ, ಮಹೀಂದ್ರ ಆ್ಯಂಡ್ ಮಹೀಂದ್ರ, ಎಚ್ ಡಿಎಫ್ ಸಿ, ಭಾರ್ತಿ ಏರ್ ಟೆಲ್, ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ. ಬುಧವಾರವೂ ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ, ನಿಫ್ಟಿ ಭರ್ಜರಿ ಏರಿಕೆಯಾಗಿತ್ತು.