ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 111 ಅಂಕಗಳಷ್ಟು ಏರಿಕೆಯೊಂದಿಗೆ ಸೋಮವಾರ(ಮೇ 24)ದ ದಿನಾಂತ್ಯದ ವಹಿವಾಟು ಕೊನೆಗೊಳಿಸಿದೆ.
ಇದನ್ನೂ ಓದಿ:ದಾಯಾದಿಗಳ ನಡುವೆ ಭೂ ವಿವಾದ : ಹಾಸನದಲ್ಲಿ ಮೂವರ ಬರ್ಬರ ಹತ್ಯೆ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 111.42 ಅಂಕಗಳ ಏರಿಕೆಯೊಂದಿಗೆ 50,651.90 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ನಿಫ್ಟಿ 22.40 ಅಂಕಗಳ ಏರಿಕೆಯೊಂದಿಗೆ 15,197.70ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯಿಂದ ಎಸ್ ಬಿಐ, ಎಲ್ ಆ್ಯಂಡ್ ಟಿ, ಐಟಿಸಿ, ಡಾ.ರೆಡ್ಡೀಸ್, ಆ್ಯಕ್ಸಿಸ್ ಬ್ಯಾಂಕ್ ಮತ್ತು ಪವರ್ ಗ್ರಿಡ್ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ಇಂಡಸ್ ಇಂಡ್ ಬ್ಯಾಂಕ್, ಆಲ್ಟ್ರಾ ಟೆಕ್ ಸಿಮೆಂಟ್, ಟೈಟಾನ್ ಮತ್ತು ಬಜಾಜ್ ಫಿನ್ ಸರ್ವ್ ಷೇರುಗಳು ನಷ್ಟ ಅನುಭವಿಸಿದೆ.
ಕೋವಿಡ್ ಎರಡನೇ ಅಲೆ ಸೋಂಕು ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಹಾಗೂ ಚೇತರಿಕೆ ಪ್ರಮಾಣ ಹೆಚ್ಚಳವಾಗುತ್ತಿರುವುದು ಷೇರುಪೇಟೆ ಹೂಡಿಕೆದಾರರ ಮೇಲೆ ಪರಿಣಾಮ ಬೀರಿರುವುದಾಗಿ ರಿಲಯನ್ಸ್ ಸೆಕ್ಯುರಿಟೀಸ್ ಸ್ಟ್ರೆಟಜಿ ಮುಖ್ಯಸ್ಥ ಬಿನೋದ್ ಮೋದಿ ತಿಳಿಸಿದ್ದಾರೆ.