Advertisement

ಮುಂಬಯಿ ಷೇರುಪೇಟೆ ಆರಂಭಿಕ ವಹಿವಾಟು; ಸೆನ್ಸೆಕ್ಸ್ 309 ಅಂಕ ಏರಿಕೆ, ನಿಫ್ಟಿ ಜಿಗಿತ

11:12 AM Mar 14, 2022 | Team Udayavani |

ಮುಂಬಯಿ: ಏಷ್ಯನ್ ಷೇರುಮಾರುಕಟ್ಟೆಯಲ್ಲಿನ ಮಿಶ್ರ ವಹಿವಾಟಿನ ಪರಿಣಾಮ ಸೋಮವಾರ (ಮಾರ್ಚ್ 14) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 309 ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಆರಂಭಗೊಂಡಿದೆ.

Advertisement

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 309.91 ಅಂಕಗಳಷ್ಟು ಏರಿಕೆಯೊಂದಿಗೆ 55,860.21 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 72.1 ಅಂಕಗಳಷ್ಟು ಏರಿಕೆಯಾಗಿದ್ದು, 16,702.55 ಅಂಕಗಳ ಮಟ್ಟ ತಲುಪಿದೆ.

ಇಂದಿನ ಆರಂಭಿಕ ವಹಿವಾಟಿನಲ್ಲಿ ಇನ್ಫೋಸಿಸ್, ಎಚ್ ಡಿಎಫ್ ಸಿ ಬ್ಯಾಂಕ್, ಟೆಕ್ ಮಹೀಂದ್ರ, ವಿಪ್ರೋ ಮತ್ತು ಸ್ಟೇಟ್ ಬ್ಯಾಂಕ್ ಇಂಡಿಯಾ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಹಿಂದೂಸ್ತಾನ್ ಯೂನಿ ಲೀವರ್, ಮಹೀಂದ್ರ ಆ್ಯಂಡ್ ಮಹೀಂದ್ರ, ಬಜಾಜ್ ಫೈನಾನ್ಸ್ ಮತ್ತು ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ ಷೇರುಗಳು ನಷ್ಟ ಕಂಡಿದೆ.

ಶುಕ್ರವಾರ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 85.91 ಅಂಕಗಳಷ್ಟು ಏರಿಕೆಯೊಂದಿಗೆ 55,550.30 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 35.55 ಅಂಕಗಳಷ್ಟು ಅಲ್ಪ ಏರಿಕೆಯೊಂದಿಗೆ 16,630.45 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next