ಮುಂಬಯಿ: ವಿದೇಶಿ ಬಂಡವಾಳದ ಒಳಹರಿವು ಮತ್ತು ಜಾಗತಿಕ ಷೇರು ಮಾರುಕಟ್ಟೆಯ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಮೇಲೂ ಬೀರಿದ್ದು, ಸೋಮವಾರ (ಜೂನ್ 07) ಸಂವೇದಿ ಸೂಚ್ಯಂಕ 150 ಅಂಕಗಳಷ್ಟು ಏರಿಕೆ ಕಂಡಿದೆ.
ಇದನ್ನೂ ಓದಿ:ಶೀಘ್ರದಲ್ಲೇ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಶ್ವಾಸವಿದೆ: ಕೇಂದ್ರ ಸರ್ಕಾರ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 150 ಅಂಕಗಳಷ್ಟು ಏರಿಕೆ ಕಂಡಿದ್ದು, 52,120.09 ಅಂಕಗಳೊಂದಿಗೆ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 29.20 ಅಂಕಗಳೊಂದಿಗೆ 15,699.45ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯಿಂದ ಪವರ್ ಗ್ರಿಡ್, ಎಲ್ ಆ್ಯಂಡ್ ಟಿ, ಎನ್ ಟಿಪಿಸಿ, ಒಎನ್ ಜಿಸಿ, ಐಟಿಸಿ, ಎಸ್ ಬಿಐ, ಬಜಾಜ್ ಆಟೋ ಮತ್ತು ಐಸಿಐಸಿಐ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಬಜಾಜ್ ಫಿನ್ ಸರ್ವ್, ಎಚ್ ಡಿಎಫ್ ಸಿ, ಏಷ್ಯನ್ ಪೇಂಟ್ಸ್ ಮತ್ತು ಡಾ.ರೆಡ್ಡೀಸ್ ಷೇರುಗಳು ನಷ್ಟ ಅನುಭವಿಸಿದೆ.
ಹಿಂದಿನ ವಹಿವಾಟಿನಲ್ಲಿ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 132.38 ಅಂಕ ಕುಸಿತವಾಗಿದ್ದು, 52,100.05ಕ್ಕೆ ದಿನಾಂತ್ಯದ ವಹಿವಾಟು ಕೊನೆಗೊಳಿಸಿತ್ತು. ಎನ್ ಎಸ್ ಇ ನಿಫ್ಟಿ ಕೂಡಾ 20.10 ಅಂಕ ಇಳಿಕೆಯಾಗಿದ್ದು, 15,670.25ರ ಗಡಿ ತಲುಪಿತ್ತು.