ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಸೋಮವಾರ(ಆಗಸ್ಟ್ 02) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 300 ಅಂಕಗಳಷ್ಟು ಏರಿಕೆ ಕಂಡಿದ್ದು, ಎಚ್ ಡಿಎಫ್ ಸಿ, ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೋಸಿಸ್ ಷೇರುಗಳು ಲಾಭಗಳಿಸಿದೆ.
ಇದನ್ನೂ ಓದಿ:ಇಂದೂ ಮುಂದುವರಿಯಲಿದೆ ಸಂಪುಟ ಸರ್ಕಸ್: 15 ಶಾಸಕರಿಗೆ ಮಾತ್ರ ಅವಕಾಶ? ಹಿರಿಯರಿಗೆ ಕೊಕ್?
ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 333.69 ಅಂಕಗಳಷ್ಟು ಏರಿಕೆಯಾಗಿದ್ದು, 52,920.53 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 101.65 ಅಂಕ ಏರಿಕೆಯೊಂದಿಗೆ 15,864.70ರ ಗಡಿ ತಲುಪಿದೆ.
ಸೆನ್ಸೆಕ್ಸ್ ಲಾಭ: ಟೈಟಾನ್, ಆ್ಯಕ್ಸಿಸ್ ಬ್ಯಾಂಕ್, ಭಾರ್ತಿ ಏರ್ ಟೆಲ್, ಎಚ್ ಡಿಎಫ್ ಸಿ, ಮಾರುತಿ, ಬಜಾಜ್ ಫಿನ್ ಸರ್ವ್, ಇನ್ಫೋಸಿಸ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಟೆಕ್ ಮಹೀಂದ್ರಾ, ಸನ್ ಫಾರ್ಮಾ, ಎನ್ ಟಿಪಿಸಿ, ಪವರ್ ಗ್ರಿಡ್ ಮತ್ತು ಡಾ.ರೆಡ್ಡೀಸ್ ಷೇರುಗಳು ನಷ್ಟ ಕಂಡಿದೆ.
ಮುಂಬಯಿ ಷೇರುಪೇಟೆಯ ಹಿಂದಿನ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 66,23 ಅಂಕ ಕುಸಿತ ಕಂಡಿದ್ದು, 52,586.84 ಅಂಕಗಳೊಂದಿಗೆ ವಹಿವಾಟು ಮುಕ್ತಾಗೊಳಿಸಿತ್ತು. ಎನ್ ಎಸ್ ಇ ನಿಫ್ಟಿ 15.40 ಅಂಕ ಇಳಿಕೆಯೊಂದಿಗೆ 15,763.05 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿತ್ತು.