ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಭರ್ಜರಿ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆ ಮೇಲೆ ಬೀರಿದ್ದು, ಗುರುವಾರ(ಜೂನ್ 03)ದ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 360 ಅಂಕಗಳಷ್ಟು ಏರಿಕೆಯಾಗಿದೆ.
ಇದನ್ನೂ ಓದಿ:ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಸಚಿವೆ ಶಶಿಕಲಾ ಜೊಲ್ಲೆ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 361.24 ಅಂಕಗಳಷ್ಟು ಏರಿಕೆಯಾಗಿ 52,210.72 ಅಂಕಗಳೊಂದಿಗೆ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 100.25 ಅಂಕಗಳ ಏರಿಕೆಯೊಂದಿಗೆ 15,676.45ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯಿಂದ ಟೈಟಾನ್, ರಿಲಯನ್ಸ್ ಇಂಡಸ್ಟ್ರೀಸ್, ಪವರ್ ಗ್ರಿಡ್, ಕೋಟಕ್ ಬ್ಯಾಂಕ್, ಎಚ್ ಡಿಎಫ್ ಸಿ, ಒಎನ್ ಜಿಸಿ ಮತ್ತು ಇನ್ಫೋಸಿಸ್ ಷೇರುಗಳು ಲಾಭಗಳಿಸಿದೆ.
ಏತನ್ಮಧ್ಯೆ ಎನ್ ಟಿಪಿಸಿ, ಬಜಾಜ್ ಆಟೋ, ಇಂಡಸ್ ಇಂಡ್ ಬ್ಯಾಂಕ್, ನೆಸ್ಲೆ ಇಂಡಿಯಾ, ಡಾ.ರೆಡ್ಡೀಸ್, ಎಸ್ ಬಿಐ ಮತ್ತು ಸನ್ ಫಾರ್ಮಾ ಷೇರುಗಳು ನಷ್ಟ ಅನುಭವಿಸಿದೆ.
ಮುಂಬಯಿ ಷೇರುಪೇಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಸೆನ್ಸೆಕ್ಸ್ 85.40 ಅಂಕಗಳಷ್ಟು ಅಲ್ಪ ಇಳಿಕೆಯಾಗಿ 51,849.48 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ ಕೇವಲ 1.35ರಷ್ಟು ಏರಿಕೆ ಕಂಡು 15,576.20ರ ಗಡಿ ತಲುಪಿತ್ತು.