ಮುಂಬಯಿ: ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಗುರುವಾರ (ಸೆಪ್ಟೆಂಬರ್ 02) ಭರ್ಜರಿ 514.33 ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ದಾಖಲೆ ಮಟ್ಟದಲ್ಲಿ ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:‘ಕೋವಿಡ್’ನ್ನು ಭಾರತ ಹೇಗೆ ಎದುರಿಸಲಿದೆ ಎಂದು ಇಡೀ ವಿಶ್ವವೇ ನೋಡುತ್ತಿತ್ತು : ಅಮಿತ್ ಶಾ
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 514.33 ಅಂಕ ಏರಿಕೆಯೊಂದಿಗೆ 57,852.54 ಅಂಕಗಳೊಂದಿಗೆ ಸಾರ್ವಕಾಲಿಕ ದಾಖಲೆಯೊಂದಿಗೆ ವಹಿವಾಟು ಕೊನೆಗೊಂಡಿದೆ. ಅದೇ ರಿತಿ ಎನ್ ಎಸ್ ಇ ನಿಫ್ಟಿ ಕೂಡಾ 157.90 ಅಂಕ ಏರಿಕೆಯಾಗಿದ್ದು, 17,234.15 ಅಂಕಗಳೊಂದಿಗೆ ದಾಖಲೆ ವಹಿವಾಟು ನಡೆಸಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯ ಪರಿಣಾಮ ಟಿಸಿಎಸ್, ಎಚ್ ಯುಎಲ್, ಆಲ್ಟ್ರಾ ಟೆಕ್ ಸಿಮೆಂಟ್, ನೆಸ್ಲೆ ಇಂಡಿಯಾ, ಕೋಟಕ್ ಬ್ಯಾಂಕ್, ಡಾ.ರೆಡ್ಡೀಸ್ ಹಾಗೂ ಟೈಟಾನ್ ಷೇರುಗಳು ಶೇ.3ಕ್ಕಿಂತಲೂ ಅಧಿಕ ಲಾಭಗಳಿಸಿದೆ.
ಮಹೀಂದ್ರ ಆ್ಯಂಡ್ ಮಹೀಂದ್ರಾ, ಬಜಾಜ್ ಆಟೋ, ಬಜಾಜ್ ಫಿನ್ ಸರ್ವ್ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ನಷ್ಟ ಅನುಭವಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಇನ್ನು ಜಾಗತಿಕವಾಗಿ ಶಾಂಘೈ, ಹಾಂಗ್ ಕಾಂಗ್ ಮತ್ತು ಟೋಕಿಯೋ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ವಹಿವಾಟು ನಡೆದಿದೆ.