ಮುಂಬೈ: ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಮಂಗಳವಾರ (ಜೂನ್ 18) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 200ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ವಹಿವಾಟು ಮುಂದುವರಿದಿದೆ.
ಇದನ್ನೂ ಓದಿ:On Camera: ರಿವರ್ಸ್ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 287.18 ಅಂಕಗಳ ಏರಿಕೆಯೊಂದಿಗೆ 77,279.95 ಅಂಕಗಳ ಮಟ್ಟ ತಲುಪಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 76.20 ಅಂಕಗಳ ಜಿಗಿತದೊಂದಿಗೆ 23,541.08 ಅಂಕಗಳಲ್ಲಿ ವಹಿವಾಟು ನಡೆದಿದೆ.
ಬಿಎಸ್ ಇ ಸೂಚ್ಯಂಕ, ನಿಫ್ಟಿ ಏರಿಕೆಯಿಂದ ವಿಪ್ರೋ, ಪವರ್ ಗ್ರಿಡ್, ಟೈಟಾನ್ ಕಂಪನಿ, ಮಹೀಂದ್ರ & ಮಹೀಂದ್ರ, ಇನ್ಫೋಸಿಸ್, ಬಜಾಜ್ ಫೈನಾನ್ಸ್, ಎನ್ ಟಿಪಿಸಿ ಷೇರುಗಳು ಲಾಭ ಗಳಿಸಿದೆ.
ಮತ್ತೊಂದೆಡೆ ಮಾರುತಿ ಸುಜುಕಿ, ಆಲ್ಟ್ರಾಟೆಕ್ ಸಿಮೆಂಟ್, ಟಾಟಾ ಸ್ಟೀಲ್, ಕೋಟಕ್ ಬ್ಯಾಂಕ್, ಏಷಿಯನ್ ಪೇಂಟ್ಸ್, ಸನ್ ಫಾರ್ಮಾ ಷೇರುಗಳು ನಷ್ಟ ಕಂಡಿದೆ.
ಈ ವಾರವೂ ಕೂಡಾ ಷೇರುಪೇಟೆ ಸಂವೇದಿ ಸೂಚ್ಯಂಕ ಏರುಗತಿಯಲ್ಲಿ ಸಾಗಲಿದೆ ಎಂಬುದು ನಮ್ಮ ನಿರೀಕ್ಷೆಯಾಗಿದೆ. ಸರ್ಕಾರದ ಆರ್ಥಿಕ ನೀತಿ, ಉತ್ತಮವಾದ ಮುಂಗಾರು ವಾತಾವರಣ ಷೇರುಪೇಟೆಯ ಮೇಲೆ ಪರಿಣಾಮ ಬೀರಲಿದೆ ಎಂದು ರೀಟೈಲ್ ರಿಸರ್ಚ್ ಮುಖ್ಯಸ್ಥ ಸಿದ್ದಾರ್ಥ್ ಖೇಮ್ಕಾ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.