ಮುಂಬೈ: ಕೇಂದ್ರ ಸರಕಾರಿ ನೌಕರರ ಹಾಗೂ ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇ.5ರಷ್ಟು ಏರಿಕೆ ಮಾಡಿರುವುದಾಗಿ ಕೇಂದ್ರ ಸರಕಾರ ಘೋಷಿಸಿದ ಹಿನ್ನೆಲೆಯಲ್ಲಿ ಬುಧವಾರ ಮುಂಬೈ ಶೇರು ಮಾರುಕಟ್ಟೆ ವಹಿವಾಟು ಭರ್ಜರಿ ಏರಿಕೆ ಕಂಡಿದೆ. ಮುಂಬೈ ಶೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 646 ಅಂಕಗಳ ಭಾರೀ ಏರಿಕೆಯೊಂದಿಗೆ 38,178 ಅಂಕಗಳೊಂದಿಗೆ ವಹಿವಾಟು ಅಂತ್ಯಕಂಡಿದೆ.
ಅದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ(ಎನ್ ಎಸ್ ಇ) 187 ಅಂಕಗಳ ಏರಿಕೆಯೊಂದಿಗೆ 11,313 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:ಕೇಂದ್ರ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್; ತುಟ್ಟಿಭತ್ಯೆ ಏರಿಕೆ, ಪಿಂಚಣಿದಾರರಿಗೂ ಲಾಭ
ಕಳೆದ ತಿಂಗಳು ಕೇಂದ್ರ ಸರಕಾರ ಕಾರ್ಪೋರೇಟ್ ತೆರಿಗೆಯನ್ನು ಶೇ.30ರಿಂದ ಶೇ.22ಕ್ಕೆ ಇಳಿಕೆ ಮಾಡಿದ್ದರಿಂದ ಕಂಪನಿಗಳ ಆದಾಯ ನಿರೀಕ್ಷಿತ ರೀತಿಯಲ್ಲಿ ಚೇತರಿಕೆ ಅಭಿವೃದ್ಧಿ ಕಂಡಿದೆ.
ಸೆನ್ಸೆಕ್ಸ್ ಸೂಚ್ಯಂಕ ಏರಿಕೆಯಿಂದ ಇಂಡಸ್ ಲ್ಯಾಂಡ್ ಬ್ಯಾಂಕ್,ಭಾರ್ತಿ ಏರ್ ಟೆಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್, ಮಹೀಂದ್ರಾ ಅಂಡ್ ಮಹೀಂದ್ರಾ, ಟಾಟಾ ಸ್ಟೀಲ್ ಶೇರುಗಳು ಶೇ.5.72ರಷ್ಟು ಏರಿಕೆಯೊಂದಿಗೆ ಲಾಭ ಗಳಿಸಿರುವುದಾಗಿ ವರದಿ ತಿಳಿಸಿದೆ.