ಮುಂಬಯಿ: ಬಾಂಬೆ ಷೇರುಪೇಟೆಯಲ್ಲಿನ ಏರಿಳಿಕೆಯ ವಹಿವಾಟಿನ ಪರಿಣಾಮ ಮಂಗಳವಾರ (ನವೆಂಬರ್ 09) ಸಂವೇದಿ ಸೂಚ್ಯಂಕ 112.16 ಅಂಕಗಳ ಕುಸಿತದೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ.
ಇದನ್ನೂ ಓದಿ:ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಕೋಚ್ ನೇಮಕ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 112.16 ಅಂಕಗಳಷ್ಟು ಇಳಿಕೆಯಾಗಿದ್ದು, 60, 433.45 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 24.20 ಅಂಕಗಳಷ್ಟು ಇಳಿಕೆಯಾಗಿದ್ದು, 18,044.30 ಅಂಕಗಳ ಗಡಿ ತಲುಪಿದೆ.
ಸೆನ್ಸೆಕ್ಸ್, ನಿಫ್ಟಿ ಕುಸಿತದಿಂದ ಮಹೀಂದ್ರ ಆ್ಯಂಡ್ ಮಹೀಂದ್ರ, ಟಾಟಾ ಮೋಟಾರ್ಸ್, ಹೀರೋ ಮೋಟಾರ್ಸ್ , ಒಎನ್ ಜಿಸಿ ಮತ್ತು ಎಸ್ ಬಿಐ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಬ್ರಿಟಾನಿಯಾ ಇಂಡಸ್ಟ್ರೀಸ್, ಎಚ್ ಡಿಎಫ್ ಸಿ ಬ್ಯಾಂಕ್, ಮಾರುತಿ ಸುಜುಕಿ, ಜೆಎಸ್ ಡಬ್ಲ್ಯು ಸ್ಟೀಲ್ ಮತ್ತು ಪವರ್ ಗ್ರಿಡ್ ಷೇರುಗಳು ನಷ್ಟ ಕಂಡಿದೆ.
ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಋಣಾತ್ಮಕ ವಹಿವಾಟಿನ ಪರಿಣಾಮ ಬಾಂಬೆ ಷೇರುಪೇಟೆಯಲ್ಲಿ ಖಾಸಗಿ ಬ್ಯಾಂಕ್ ಗಳ ಷೇರು ಮಾರಾಟದಲ್ಲಿ ಇಳಿಕೆ ಕಂಡಿತ್ತು. ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದ ಬಾಂಬೆ ಷೇರುಪೇಟೆ ಸಂಜೆ ಇಳಿಕೆಯೊಂದಿಗೆ ವಹಿವಾಟು ಕೊನೆಗೊಂಡಿದೆ.