ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಸೋಮವಾರ(ಜುಲೈ 12) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಏರಿಕೆ, ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:ಕೆ.ಆರ್.ಎಸ್ ಜಲಾಶಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ : ಮುರುಗೇಶ್ ನಿರಾಣಿ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 13.50 ಅಂಕಗಳ ಇಳಿಕೆಯೊಂದಿಗೆ 52,372.69 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಳಿಸಿದೆ. ಎನ್ ಎಸ್ ಇ ನಿಫ್ಟಿ ಕೇವಲ 2.80 ಅಂಕಗಳ ಏರಿಕೆಯೊಂದಿಗೆ 15,692.60ರ ಗಡಿಗೆ ಏರಿಕೆಯಾಗಿದೆ.
ಸೆನ್ಸೆಕ್ಸ್ ಇಳಿಕೆಯ ಪರಿಣಾಮ ಭಾರ್ತಿ ಏರ್ ಟೆಲ್, ಟಾಟಾ ಸ್ಟೀಲ್, ಎಚ್ ಡಿಎಫ್ ಸಿ ಬ್ಯಾಂಕ್, ಇನ್ಫೋಸಿಸ್, ಎಚ್ ಡಿಎಫ್ ಸಿ, ಬಜಾಜ್ ಆಟೋ, ಪವರ್ ಗ್ರಿಡ್ ಷೇರುಗಳು ನಷ್ಟ ಅನುಭವಿಸಿದೆ. ಮತ್ತೊಂದೆಡೆ ಆಲ್ಟ್ರಾಟೆಕ್ ಸಿಮೆಂಟ್, ಐಸಿಐಸಿಐ ಬ್ಯಾಂಕ್, ಎಸ್ ಬಿಐ, ಆ್ಯಕ್ಸಿಸ್ ಬ್ಯಾಂಕ್, ಕೋಟಕ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ.
ಮುಂಬಯಿ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ ಏರಿಕೆ ಕಂಡಿತ್ತು, ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ ಏರಿಕೆ ಕಂಡಿತ್ತು.