ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ವಹಿವಾಟಿನ ಪರಿಣಾಮ ಗುರುವಾರ(ಡಿಸೆಂಬರ್ 16) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 113 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಳಿಸಿದೆ.
ಇದನ್ನೂ ಓದಿ:ದೇವರಕೊಂಡ, ಮೈಕ್ ಟೈಸನ್, ಪಾಂಡೆ ಅಭಿನಯದ ಲೈಗರ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 113.11 ಅಂಕ ಏರಿಕೆಯಾಗಿದ್ದು, 57,901.14 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 27 ಅಂಕಗಳ ಏರಿಕೆಯೊಂದಿಗೆ 17,248.40 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಬಜಾಜ್ ಫೈನಾನ್ಸ್, ಇನ್ಫೋಸಿಸ್, ಬಿಪಿಸಿಎಲ್, ಟೈಟಾನ್ ಕಂಪನಿ, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿದೆ. ಸಿಪ್ಲಾ, ಮಾರುತಿ ಸುಜುಕಿ, ಐಸಿಐಸಿಐ ಬ್ಯಾಂಕ್, ಹೀರೋ ಮೋಟಾರ್ ಕಾರ್ಪೋರೇಶನ್ ಷೇರುಗಳು ನಷ್ಟ ಕಂಡಿದೆ.
ಇಂದು ಬೆಳ್ಗೆ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 494.12 ಅಂಕಗಳಷ್ಟು ಏರಿಕೆಯೊಂದಿಗೆ 58,282.15 ಅಂಕಗಳೊಂದಿಗೆ ಆರಂಭಿಕ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 122.15 ಅಂಕಗಳಷ್ಟು ಏರಿಕೆಯಾಗಿದ್ದು, 17,343.55 ಅಂಕಗಳ ಮಟ್ಟ ತಲುಪಿತ್ತು.