ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ನೀರಸ ವಹಿವಾಟಿನ ಪರಿಣಾಮ ಮಂಗಳವಾರ (ನವೆಂಬರ್ 30) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 195.71 ಅಂಕ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಯಾವುದೇ ಕಾರಣಕ್ಕೂ ಸನ್ ಬರ್ನ್ ಸಂಗೀತೋತ್ಸವಕ್ಕೆ ಅವಕಾಶ ನೀಡುವುದಿಲ್ಲ: ಪ್ರಮೋದ್ ಸಾವಂತ್
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 195.71 ಅಂಕ ಇಳಿಕೆಯಾಗಿದ್ದು, 57,064.87 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 81.40 ಅಂಕ ಕುಸಿತವಾಗಿದ್ದು, 16,972.60 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಇಳಿಕೆಯಿಂದ ಟಾಟಾ ಸ್ಟೀಲ್, ಕೋಟಕ್ ಮಹೀಂದ್ರ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಬಜಾಜ್ ಆಟೋ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಪವರ್ ಗ್ರಿಡ್ ಕಾರ್ಪೋರೇಶನ್, ಶ್ರೀ ಸಿಮೆಂಟ್, ಬಜಾಜ್ ಫಿನ್ ಸರ್ವ್ ಷೇರುಗಳು ಲಾಭಗಳಿಸಿದೆ.
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿಯೇ 504.75 ಅಂಕ ಏರಿಕೆಯಾಗಿದ್ದು, 57,765.33 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 149.65 ಅಂಕ ಏರಿಕೆಯೊಂದಿಗೆ 17,203.60 ಅಂಕಗಳಲ್ಲಿ ವಹಿವಾಟು ಮುಂದುವರಿದಿತ್ತು.