ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಭರ್ಜರಿ ವಹಿವಾಟು ಹಾಗೂ ಹೂಡಿಕೆದಾರರು ಹೆಚ್ಚಿನ ಮಟ್ಟದ ಲಾಭ ಕಾಯ್ದಿರಿಸಿದ ಪರಿಣಾಮ ಮಂಗಳವಾರ (ಜೂನ್ 01) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಅಲ್ಪ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಳಿಸಿದೆ.
ಇದನ್ನೂ ಓದಿ:ನಿಮ್ಮ ಆಧಾರ್ ಕಾರ್ಡ್ ಗೆ ನಿಮ್ಮ ಬ್ಯಾಂಕ್ ಖಾತೆಯ ಸಂಖ್ಯೆ ಲಿಂಕ್ ಆಗಿದೆಯೇ..?
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಕೇವಲ 2.56 ಅಂಕಗಳಷ್ಟು ಕುಸಿತಗೊಂಡು 51,934.88 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 7.95ರಷ್ಟು ಇಳಿಕೆಯಾಗಿ 15,574.85ರ ಗಡಿ ತಲುಪಿದೆ.
ಸೆನ್ಸೆಕ್ಸ್ ಇಳಿಕೆಯಿಂದ ಐಸಿಐಸಿಐ ಬ್ಯಾಂಕ್, ಆಲ್ಟ್ರಾಟೆಕ್ ಸಿಮೆಂಟ್, ಏಷ್ಯನ್ ಪೇಂಟ್ಸ್, ಐಟಿಸಿ, ಕೋಟಕ್ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್ ಮತ್ತು ಪವರ್ ಗ್ರಿಡ್ ಷೇರುಗಳು ನಷ್ಟ ಅನುಭವಿಸಿದೆ. ಮತ್ತೊಂದೆಡೆ ಒಎನ್ ಜಿಸಿ, ಬಜಾಜ್ ಫೈನಾನ್ಸ್, ಎಸ್ ಬಿಐ, ಬಜಾಜ್ ಆಟೋ ಮತ್ತು ಎಚ್ ಡಿಎಫ್ ಸಿ ಷೇರುಗಳು ಲಾಭಗಳಿಸಿದೆ.
ಜಾಗತಿಕ ಷೇರು ಮಾರುಕಟ್ಟೆಯಾದ ಶಾಂಘೈ, ಹಾಂಗ್ ಕಾಂಗ್ ಮತ್ತು ಸಿಯೋಲ್ ನಲ್ಲಿ ಭರ್ಜರಿ ಷೇರು ವಹಿವಾಟು ನಡೆದಿದ್ದು, ಟೋಕಿಯೋದಲ್ಲಿ ಷೇರುಮಾರುಕಟ್ಟೆ ಸೆನ್ಸೆಕ್ಸ್ ಇಳಿಕೆ ಕಂಡಿರುವುದಾಗಿ ವರದಿ ತಿಳಿಸಿದೆ.