ಮುಂಬಯಿ: ವಿದೇಶಿ ಹೂಡಿಕೆಯ ಹೊರಹರಿವು ಮತ್ತು ಜಾಗತಿಕ ಮಾರುಕಟ್ಟೆಯ ಮಿಶ್ರ ವಹಿವಾಟಿನ ಪ್ರತಿಫಲವಾಗಿ ಮಂಗಳವಾರ(ಜೂನ್ 29) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಅಲ್ಪ ಚೇತರಿಕೆಯೊಂದಿಗೆ ವಹಿವಾಟು ಆರಂಭಿಸಿದೆ.
ಇದನ್ನೂ ಓದಿ:ಜಮ್ಮು ವಾಯುನೆಲೆ ಮೇಲೆ ಡ್ರೋನ್ ದಾಳಿ ಪ್ರಕರಣದ ತನಿಖೆ ಎನ್ ಐಎಗೆ ಹಸ್ತಾಂತರ
ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ 22.82 ಅಲ್ಪ ಚೇತರಿಕೆಯೊಂದಿಗೆ 52,758 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೇವಲ 7.45 ಅಂಕಗಳ ಏರಿಕೆಯೊಂದಿಗೆ 15,822.15ರ ಗಡಿ ತಲುಪಿದೆ.
ಸೆನ್ಸೆಕ್ಸ್, ನಿಫ್ಟಿ ಅಲ್ಪ ಏರಿಕೆಯಿಂದ ಏಷ್ಯನ್ ಪೇಂಟ್ಸ್, ಪವರ್ ಗ್ರಿಡ್, ಎಲ್ ಆ್ಯಂಡ್ ಟಿ, ಟಿಸಿಎಸ್, ರಿಲಯನ್ಸ್ ಇಂಡಸ್ಟ್ರೀಸ್, ಎಚ್ ಸಿಎಲ್ ಟೆಕ್ ಮತ್ತು ಐಟಿಸಿ ಷೇರುಗಳ ಲಾಭಗಳಿಸಿದೆ. ಮತ್ತೊಂದೆಡೆ ಐಸಿಐಸಿಐ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ, ಎಚ್ ಡಿಎಫ್ ಸಿ ಬ್ಯಾಂಕ್, ಕೋಟಕ್ ಬ್ಯಾಂಕ್, ಇನ್ಫೋಸಿಸ್ ಷೇರುಗಳು ನಷ್ಟ ಅನುಭವಿಸಿದೆ.
ಮಂಗಳವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 189.45 ಅಂಕಗಳ ಏರಿಕೆಯೊಂದಿಗೆ 52.732.59 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು. ನಿಫ್ಟಿ ಕೂಡಾ 45.65 ಅಂಕ ಏರಿಕೆಯಾಗಿ 15,814.70 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿತ್ತು.