ಮುಂಬಯಿ:ರಷ್ಯಾ, ಉಕ್ರೇನ್ ನಡುವಿನ ಯುದ್ಧದ ಸ್ಥಿತಿಯ ಪರಿಣಾಮ ಸೋಮವಾರ (ಫೆ.21) ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್, ನಿಫ್ಟಿ ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಇದನ್ನೂ ಓದಿ:ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ : ಹೈಕೋರ್ಟ್ ನಲ್ಲಿ ಪುನರುಚ್ಚಾರ
ಮುಂಬಯಿ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಸುಮಾರು 700 ಅಂಕಗಳಷ್ಟು ಕುಸಿತ ಕಂಡಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು ಕುರಿತು ಅಮೆರಿಕ, ರಷ್ಯಾ ನಡುವಿನ ಮಾತುಕತೆ ನಡೆಯಲಿದೆ ಎಂಬ ಭರವಸೆ ಹಿನ್ನೆಲೆಯಲ್ಲಿ ಮಧ್ಯಂತರ ವಹಿವಾಟಿನಲ್ಲಿ ಹೂಡಿಕೆದಾರರು ಹೆಚ್ಚಿನ ಆಸಕ್ತಿ ತೋರಿಸಿದ್ದರು.
ಕೊನೆಗೂ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 149.38 ಅಂಕಗಳಷ್ಟು ಇಳಿಕೆಯಾಗಿದ್ದು, 57,683.59 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 69.65 ಕುಸಿದಿದ್ದು, 17,206.65 ಅಂಕಗಳ ಮಟ್ಟ ತಲುಪಿದೆ.
ಸನ್ ಫಾರ್ಮಾ, ಟಿಸಿಎಸ್ ಮತ್ತು ಐಟಿಸಿ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ವಿಪ್ರೋ, ಇನ್ಫೋಸಿಸ್ ಷೇರುಗಳು ಲಾಭಗಳಿಸಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಡುವಿನ ಸಂಭಾವ್ಯ ಮಾತುಕತೆ ಹಿನ್ನೆಲೆಯಲ್ಲಿ ಏಷ್ಯಾದ ಷೇರುಮಾರುಕಟ್ಟೆಯ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಭಾರೀ ಇಳಿಕೆ ಕಂಡಿತ್ತು.