ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ನೆಗೆಟಿವ್ ಟ್ರೆಂಡ್ ನಡುವೆಯೂ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಗುರುವಾರ(ಜೂನ್ 03) 383 ಅಂಕಗಳ ಏರಿಕೆಯೊಂದಿಗೆ ದಾಖಲೆ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಳಿಸಿದೆ.
ಇದನ್ನೂ ಓದಿ:Covid ಔಷಧ ಅನಧಿಕೃತ ದಾಸ್ತಾನು, ಗೌತಮ್ ಗಂಭೀರ್ ಫೌಂಡೇಶನ್ ದೋಷಿ: ಹೈಕೋರ್ಟ್
ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ 382.95 ಅಂಕಗಳ ಏರಿಕೆಯೊಂದಿಗೆ 52,232.43ರ ಗಡಿ ತಲುಪುವ ಮೂಲಕ ದಾಖಲೆ ಮಟ್ಟದಲ್ಲಿ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 114.15 ಅಂಕಗಳಷ್ಟು ಜಿಗಿತ ಕಂಡಿದ್ದು, 15,690.43ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯಿಂದ ಟೈಟಾನ್, ಒಎನ್ ಜಿಸಿ, ಎಲ್ ಆ್ಯಂಡ್ ಟಿ, ಕೋಟಕ್ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಬಜಾಜ್ ಫೈನಾನ್ಸ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ಲಾಭ ಗಳಿಸಿವೆ.
ಏತನ್ಮಧ್ಯೆ ಇಂಡಸ್ ಇಂಡ್ ಬ್ಯಾಂಕ್, ಪವರ್ ಗ್ರಿಡ್, ಬಜಾಜ್ ಆಟೋ, ಮಹೀಂದ್ರಾ ಆ್ಯಂಡ್ ಮಹೀಂದ್ರಾ ಮತ್ತು ಡಾ.ರೆಡ್ಡೀಸ್ ಷೇರುಗಳು ನಷ್ಟ ಅನುಭವಿಸಿದೆ. ಪ್ರಮುಖ ಆರ್ಥಿಕ ಸೇವೆಗಳ ಬೆಂಬಲದ ಹಿನ್ನೆಲೆಯಲ್ಲಿ ಮುಂಬಯಿ ಷೇರುಪೇಟೆಯಲ್ಲಿ ಧನಾತ್ಮಕ ವಹಿವಾಟಿಗೆ ಸಾಕ್ಷಿಯಾಗಿರುವುದಾಗಿ ರಿಲಯನ್ಸ್ ಸೆಕ್ಯುರಿಟೀಸ್ ಸ್ಟ್ರೆಟಜಿ ಹೆಡ್ ಬಿನೋದ್ ಮೋದಿ ತಿಳಿಸಿದ್ದಾರೆ.