ಮುಂಬಯಿ: ಜಾಗತಿಕ ಮಾರುಕಟ್ಟೆಯಲ್ಲಿ ಅಧಿಕ ಷೇರು ವಹಿವಾಟಿನ ಪರಿಣಾಮ ಗುರುವಾರ(ಜುಲೈ 08) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 486 ಅಂಕಗಳ ಕುಸಿತ ಕಂಡಿದ್ದು, ಐಸಿಐಸಿಐ ಬ್ಯಾಂಕ್, ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ.
ಇದನ್ನೂ ಓದಿ:ರೇಣುಕಾಚಾರ್ಯಗೆ ಇಷ್ಟೆಲ್ಲಾ ಸಿಕ್ಕಿದೆ ಎಂದರೆ ಅದರ ಹಿಂದೆ ನನ್ನ ಶ್ರಮವಿದೆ: ಯೋಗೇಶ್ವರ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 485.82 ಅಂಕ ಕುಸಿತ ಕಂಡಿದ್ದು, 52,568.94 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 151.75 ಅಂಕ ಕುಸಿತವಾಗಿದ್ದು, 15, 727.90ರ ಗಡಿಗೆ ಕುಸಿದಿದೆ.
ಸೆನ್ಸೆಕ್ಸ್ ನಷ್ಟದ ಪರಿಣಾಮ ಟಾಟಾ ಸ್ಟೀಲ್, ಸನ್ ಫಾರ್ಮಾ, ಐಸಿಐಸಿಐ ಬ್ಯಾಂಕ್, ಎಸ್ ಬಿಐ, ಕೋಟಕ್ ಬ್ಯಾಂಕ್ ಮತ್ತು ಡಾ.ರೆಡ್ಡೀಸ್ ಷೇರುಗಳು ನಷ್ಟ ಅನುಭವಿಸಿದೆ. ಏತನ್ಮಧ್ಯೆ ಟೆಕ್ ಮಹೀಂದ್ರಾ, ಬಜಾಜ್ ಆಟೋ, ಪವರ್ ಗ್ರಿಡ್ ಮತ್ತು ಎನ್ ಟಿಪಿಸಿ ಷೇರುಗಳು ಲಾಭಗಳಿಸಿದೆ.
ಇಂದು ಬೆಳಗ್ಗೆ ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ ಅಲ್ಪ ಪ್ರಮಾಣದ ಏರಿಕೆ ಕಂಡಿದ್ದು, ನಿಫ್ಟಿ ಇಳಿಕೆಯಾಗುವ ಮೂಲಕ ಹಾವು-ಏಣಿ ವಹಿವಾಟಿಗೆ ಸಾಕ್ಷಿಯಾಗಿತ್ತು.