ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಮಂಗಳವಾರ (ಅಕ್ಟೋಬರ್ 05) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 446 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಲಕ್ನೋ ವಿಮಾನ ನಿಲ್ದಾಣದಲ್ಲಿ ಚತ್ತೀಸ್ ಗಢ್ ಸಿಎಂಗೆ ತಡೆಯೊಡ್ಡಿದ ಪೊಲೀಸರು, ಸ್ಥಳದಲ್ಲೇ ಧರಣಿ!
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 445.56 ಅಂಕಗಳಷ್ಟು ಏರಿಕೆಯೊಂದಿಗೆ 59,744.88 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ 131.05 ಅಂಕ ಏರಿಕೆಯಾಗಿದ್ದು, 17,822.30 ಅಂಕಗಳ ದಾಖಲೆಯ ಮಟ್ಟ ತಲುಪಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯ ಬಳಿಕ ಇಂಡಸ್ ಇಂಡ್ ಬ್ಯಾಂಕ್, ಭಾರ್ತಿ ಏರ್ ಟೆಲ್, ಎಚ್ ಸಿಎಲ್ ಟೆಕ್, ರಿಲಯನ್ಸ್ ಇಂಡಸ್ಟ್ರೀಸ್, ಟೈಟಾನ್ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಸನ್ ಫಾರ್ಮಾ, ಐಟಿಸಿ, ಪವರ್ ಗ್ರಿಡ್, ಆಲ್ಟ್ರಾಟೆಕ್ ಸಿಮೆಂಟ್ ಮತ್ತು ನೆಸ್ಲೆ ಇಂಡಿಯಾ ಷೇರುಗಳು ನಷ್ಟ ಕಂಡಿದೆ.
ಸೆನ್ಸೆಕ್ಸ್ 60 ಅಂಕಗಳ ಗಡಿ ದಾಟಿದ್ದ ನಂತರ ನಾಲ್ಕು ದಿನಗಳ ಅವಧಿಯಲ್ಲಿ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ, ನಿಫ್ಟಿ ಕುಸಿತ ಕಾಣುತ್ತಿದ್ದು, ಇದೀಗ ಮತ್ತೆ ಚೇತರಿಕೆಯ ಹಾದಿಯಲ್ಲಿದ್ದು, ಮತ್ತೆ 60 ಸಾವಿರ ಗಡಿ ದಾಟುವ ನಿರೀಕ್ಷೆ ಇದ್ದಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ನಿರೀಕ್ಷೆಯಲ್ಲಿರುವುದಾಗಿ ವರದಿ ತಿಳಿಸಿದೆ.