ನವದೆಹಲಿ:ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಭರ್ಜರಿ ವಹಿವಾಟಿನ ಪರಿಣಾಮ ಶುಕ್ರವಾರ (ಜೂನ್ 03) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 550ಕ್ಕೂ ಹಚ್ಚು ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಮುಂದುವರಿದಿದೆ.
ಇದನ್ನೂ ಓದಿ:ಒಂದು ಕುಟುಂಬಕ್ಕೆ ಒಂದು ಟಿಕೆಟ್ ಸೂತ್ರವೇ ಅಂತಿಮವಲ್ಲ: ಸುರ್ಜೇವಾಲಾ ಭರವಸೆ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 565.66 ಅಂಕ ಏರಿಕೆಯಾಗಿದ್ದು, 56,383.77 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 159.85 ಅಂಕ ಏರಿಕೆಯೊಂದಿಗೆ 16,787.85 ಅಂಕಗಳ ಗಡಿ ತಲುಪಿದೆ.
ಸೆನ್ಸೆಕ್ಸ್ ಏರಿಕೆಯಿಂದ ವಿಪ್ರೋ, ಎಚ್ ಸಿಎಲ್ ಟೆಕ್ನಾಲಜೀಸ್, ಇನ್ಫೋಸಿಸ್, ಟೆಕ್ ಮಹೀಂದ್ರ, ರಿಲಯನ್ಸ್ ಇಂಡಸ್ಟ್ರೀಸ್, ಬಜಾಜ್ ಫಿನ್ ಸರ್ವ್, ಟಿಸಿಎಸ್ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ಲಾಭ ಗಳಿಸಿದೆ.
ಮತ್ತೊಂದೆಡೆ ಆಲ್ಟ್ರಾಟೆಕ್ ಸಿಮೆಂಟ್, ಎನ್ ಟಿಪಿಸಿ, ಭಾರ್ತಿ ಏರ್ ಟೆಲ್ ಮತ್ತು ಏಷಿಯನ್ ಪೇಂಟ್ಸ್ ಷೇರುಗಳು ನಷ್ಟ ಕಂಡಿದೆ. ಇನ್ನುಳಿದಂತೆ ಜಾಗತಿಕ ಮಟ್ಟದಲ್ಲಿ ಸಿಯೋಲ್, ಟೋಕಿಯೋ ಷೇರುಪೇಟೆ ಸೆನ್ಸೆಕ್ಸ್ ಏರಿಕೆ ಕಂಡಿದೆ.