ಮುಂಬಯಿ: ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ಷೇರುಗಳ ಭರ್ಜರಿ ಖರೀದಿಯ ಪರಿಣಾಮ ಸೋಮವಾರ(ಮೇ 17) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 848 ಅಂಕಗಳ ಭರ್ಜರಿ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಳಿಸಿದೆ.
ಇದನ್ನೂ ಓದಿ:‘ತೌಖ್ತೇ’ ಅಬ್ಬರ : ಗುಜರಾತ್, ಮುಂಬೈ ಕರಾವಳಿ ಭಾಗಗಳಲ್ಲಿ ಹೈ ಅಲರ್ಟ್..!
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 848.18 ಅಂಕಗಳ ಏರಿಕೆಯೊಂದಿಗೆ 49,580.73 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 245.35 ಅಂಕ ಏರಿಕೆಯೊಂದಿಗೆ 14,923.15ರ ಗಡಿ ತಲುಪಿದೆ.
ಸೆನ್ಸೆಕ್ಸ್ ಏರಿಕೆಯಿಂದ ಇಂಡಸ್ ಇಂಡ್ ಬ್ಯಾಂಕ್, ಎಸ್ ಬಿಐ, ಐಸಿಐಸಿಐ ಬ್ಯಾಂಕ್, ಎಚ್ ಡಿಎಫ್ ಸಿ, ಆ್ಯಕ್ಸಿಸ್ ಬ್ಯಾಂಕ್, ಬಜಾಜ್ ಫಿನ್ ಸರ್ವ್ ಮತ್ತು ಆಲ್ಟ್ರಾ ಟೆಕ್ ಸಿಮೆಂಟ್ ಷೇರುಗಳು ಲಾಭ ಗಳಿಸಿದೆ.
ಮತ್ತೊಂದೆಡೆ ಎಲ್ ಆ್ಯಂಡ್ ಟಿ, ಭಾರ್ತಿ ಏರ್ ಟೆಲ್, ನೆಸ್ಲೆ ಇಂಡಿಯಾ, ಸನ್ ಫಾರ್ಮಾ ಮತ್ತು ಪವರ್ ಗ್ರಿಡ್ ಷೇರುಗಳು ನಷ್ಟ ಅನುಭವಿಸಿದೆ. ದೇಶದಲ್ಲಿ ಕೋವಿಡ್ ಎರಡನೇ ಅಲೆ ಸೋಂಕು ಪ್ರಕರಣ ಇಳಿಕೆಯಾಗುತ್ತಿರುವುದು ಹೂಡಿಕೆದಾರರಲ್ಲಿ ವಹಿವಾಟಿನ ಮೇಲೆ ವಿಶ್ವಾಸಮೂಡಿಸಿರುವುದಾಗಿ ರಿಲಯನ್ಸ್ ಸೆಕ್ಯುರಿಟೀಸ್ ಸ್ಟ್ರೆಟಜಿ ಮುಖ್ಯಸ್ಥ ಬಿನೋದ್ ಮೋದಿ ತಿಳಿಸಿದ್ದಾರೆ.