ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಮಂಗಳವಾರ(ಅಕ್ಟೋಬರ್ 26) ಬಾಂಬೆ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 300ಕ್ಕೂ ಅಧಿಕ ಅಂಕ ಏರಿಕೆ ಕಂಡಿದೆ.
ಇದನ್ನೂ ಓದಿ:ಶಿರಸಿ: ಕೋಟ್ಯಾಂತರ ರೂ. ಮೌಲ್ಯದ ಅಂಬರ್ ಗ್ರೀಸ್ ವಶ, ಇಬ್ಬರ ಬಂಧನ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 318.07 ಅಂಕ ಏರಿಕೆಯಾಗಿದ್ದು, 61,285.75 ಅಂಕಗಳೊಂದಿಗೆ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 93.75 ಅಂಕಗಳ ಏರಿಕೆಯೊಂದಿಗೆ 18,219.15 ಅಂಕಗಳ ಮಟ್ಟ ತಲುಪಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಟೆಕ್ ಮಹೀಂದ್ರ ಷೇರುಗಳು ಶೇ.6ರಷ್ಟು ಲಾಭಗಳಿಸಿದೆ. ಇದರೊಂದಿಗೆ ಸಾಫ್ಟ್ ವೇರ್ ದಿಗ್ಗಜ ಟೆಕ್ ಮಹೀಂದ್ರ ಸೆಪ್ಟೆಂಬರ್ ತಿಂಗಳ ತ್ರೈಮಾಸಿಕದಲ್ಲಿ 1,338.7 ಕೋಟಿ ರೂಪಾಯಿ ಲಾಭಗಳಿಸಿದೆ.
ಭಾರ್ತಿ ಏರ್ ಟೆಲ್, ಬಜಾಜ್ ಫೈನಾನ್ಸ್, ಟಾಟಾ ಸ್ಟೀಲ್, ಎಲ್ ಆ್ಯಂಡ್ ಟಿ, ಐಟಿಸಿ ಮತ್ತು ಎಸ್ ಬಿಐ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಐಸಿಐಸಿಐ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಪವರ್ ಗ್ರಿಡ್, ಎಚ್ ಯುಎಲ್ ಮತ್ತು ಡಾ.ರೆಡ್ಡೀಸ್ ಷೇರುಗಳು ನಷ್ಟ ಕಂಡಿದೆ.
ಸೋಮವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 145.43 ಅಂಕಗಳಷ್ಟು ಏರಿಕೆಯಾಗಿದ್ದು, 60,967.05 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟನ್ನು ಮುಕ್ತಾಯಗೊಳಿಸಿತ್ತು. ಎನ್ ಎಸ್ ಇ ನಿಫ್ಟಿ ಕೂಡಾ 10.50 ಅಂಕಗಳ ಅಲ್ಪ ಏರಿಕೆಯೊಂದಿಗೆ 18,125.40 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.