ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಭರ್ಜರಿ ವಹಿವಾಟಿನ ಪರಿಣಾಮ ಮಂಗಳವಾರ(ಮೇ 18) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತೆ 50,000 ಗಡಿ ದಾಟಿದ್ದು, ಎಚ್ ಡಿಎಫ್ ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿವೆ.
ಇದನ್ನೂ ಓದಿ:ಭಾರತದ ವನಿತಾ ಕ್ರಿಕೆಟ್ ಆಟಗಾರ್ತಿ ಪ್ರಿಯಾ ಪೂನಿಯಾ ತಾಯಿ ಕೋವಿಡ್ ಗೆ ಬಲಿ!
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 612.60 ಅಂಕ ಏರಿಕೆಯಾಗಿ, 50,193.33 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 184.95 ಅಂಕ ಏರಿಕೆಯಾಗಿ 15,108.10ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯಿಂದ ಮಹೀಂದ್ರ ಆ್ಯಂಡ್ ಮಹೀಂದ್ರ, ಬಜಾಜ್ ಆಟೋ, ಟೈಟಾನ್, ಬಜಾಜ್ ಫೈನಾನ್ಸ್, ಎಚ್ ಡಿಎಫ್ ಸಿ ಬ್ಯಾಂಕ್ ಮತ್ತು ಪವರ್ ಗ್ರಿಡ್ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ಭಾರ್ತಿ ಏರ್ ಟೆಲ್, ಐಟಿಸಿ, ಎಸ್ ಬಿಐ ಷೇರುಗಳು ನಷ್ಟ ಕಂಡಿದೆ.
ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದು, ವೇಗವಾಗಿ ಆರ್ಥಿಕ ಚೇತರಿಕೆಯಾಗುತ್ತಿರುವುದು ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ ಎಂದು ರಿಲಯನ್ಸ್ ಸೆಕ್ಯುರಿಟೀಸ್ ಸ್ಟ್ರೆಟಜಿ ಹೆಡ್ ಬಿನೋದ್ ಮೋದಿ ತಿಳಿಸಿದ್ದಾರೆ.