Advertisement

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಅಂಕ ದಾಖಲೆ ಮಟ್ಟದ ಏರಿಕೆ, ನಿಫ್ಟಿ 16,550

07:09 PM Aug 16, 2021 | |

ಮುಂಬಯಿ:ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೋಮವಾರ (ಆಗಸ್ಟ್ 16) 145 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ಮುಕ್ತಾಯಗೊಳಿಸಿದೆ. ಸೆನ್ಸೆಕ್ಸ್ ಏರಿಕೆಯಿಂದ ರಿಲಯನ್ಸ್ ಇಂಡಸ್ಟ್ರೀಸ್, ಬಜಾಜ್ ಫೈನಾನ್ಸ್, ಟಾಟಾ ಸ್ಟೀಲ್ ಷೇರುಗಳು ಲಾಭಗಳಿಸುವಂತಾಗಿದೆ.

Advertisement

ಇದನ್ನೂ ಓದಿ:ಕೋವಿಡ್ : ಮೂರು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ: ರಾಜ್ಯದಲ್ಲಿಂದು 1065 ಕೇಸ್ ಪತ್ತೆ   

ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 145.29 ಅಂಕಗಳ ಏರಿಕೆಯೊಂದಿಗೆ ದಾಖಲೆಯ 55,582.58 ಅಂಕದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಷೇರುಪೇಟೆಯ ಮಧ್ಯಂತರದ ವಹಿವಾಟಿನ ವೇಳೆ ಸೆನ್ಸೆಕ್ಸ್ 55,680.75 ಅಂಕ ತಲುಪಿತ್ತು. ಇದೇ ರೀತಿ ಎಸ್ ಎಸ್ ಇ ನಿಫ್ಟಿ 33.95 ಅಂಕ ಏರಿಕೆಯೊಂದಿಗೆ 16,563.05 ಅಂಕಗಳ ದಾಖಲೆಯ ಮಟ್ಟದಲ್ಲಿ ವಹಿವಾಟನ್ನು ಕೊನೆಗೊಳಿಸಿದೆ.

ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಬಜಾಜ್ ಫಿನ್ ಸರ್ವ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಸುಮಾರು ಶೇ.4ರಷ್ಟು ಲಾಭಗಳಿಸಿದೆ. ಏತನ್ಮಧ್ಯೆ ಮಾರುತಿ, ಬಜಾಜ್ ಆಟೋ, ಪವರ್ ಗ್ರಿಡ್, ಆಲ್ಟ್ರಾಟೆಕ್ ಸಿಮೆಂಟ್ ಷೇರುಗಳು ನಷ್ಟ ಕಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next