ಮುಂಬಯಿ: ಕಚ್ಛಾ ತೈಲ ಬೆಲೆ ಏರಿಕೆ ಮತ್ತು ವಿದೇಶಿ ನಿಧಿಯ ನಿರಂತರ ಮಾರಾಟದ ಪರಿಣಾಮ ಸೋಮವಾರ (ಜೂನ್ 06) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 227 ಅಂಕ ಇಳಿಕೆಯೊಂದಿಗೆ ವಹಿವಾಟು ಮುಂದುವರಿದಿದೆ.
ಇದನ್ನೂ ಓದಿ:ಇಬ್ರಾಹಿಂಗೆ ಮಾನ- ಮರ್ಯಾದೆ ಏನೂ ಇಲ್ಲ. ಜೆಡಿಎಸ್ ನಲ್ಲಿ ಸ್ವಾತಂತ್ರ್ಯವಿಲ್ಲ: ಸಿದ್ದರಾಮಯ್ಯ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 226.07 ಅಂಕ ಇಳಿಕೆಯೊಂದಿಗೆ 55,542.53 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 67.05 ಅಂಕಗಳಷ್ಟು ಕುಸಿತಗೊಂಡಿದ್ದು, 16,517 ಅಂಕಗಳ ಗಡಿ ತಲುಪಿದೆ.
ಸೆನ್ಸೆಕ್ಸ್ ಕುಸಿತದಿಂದ ಟೆಕ್ ಮಹೀಂದ್ರ, ಏಷ್ಯನ್ ಪೇಂಟ್ಸ್, ವಿಪ್ರೋ, ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್, ಬಜಾಜ್ ಫಿನ್ ಸರ್ವ್, ಇನ್ಫೋಸಿಸ್, ಟಾಟಾ ಸ್ಟೀಲ್ ಮತ್ತು ಟೈಟಾನ್ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಮಹೀಂದ್ರ ಆ್ಯಂಡ್ ಮಹೀಂದ್ರ, ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಇನ್ನುಳಿದಂತೆ ಟೋಕಿಯೋ, ಶಾಂಘೈ ಮತ್ತು ಹಾಂಗ್ ಕಾಂಗ್ ಷೇರುಪೇಟೆ ಸೆನ್ಸೆಕ್ಸ್ ಏರಿಕೆಯೊಂದಿಗೆ ವಹಿವಾಟು ನಡೆದಿದೆ.