ಮುಂಬಯಿ:ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಮಿಶ್ರ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಬುಧವಾರ(ಜೂನ್ 02) 85 ಅಂಕಗಳ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
ಇದನ್ನೂ ಓದಿ:4 ವರ್ಷ ಪಾಕ್ ಜೈಲಿನಲ್ಲಿದ್ದ ತೆಲಂಗಾಣ ಟೆಕ್ಕಿ ಮನೆಗೆ ವಾಪಸ್: ಏನಿದು ಪ್ರಕರಣ?
ಮುಂಬಯಿ ಷೇರುಪೇಟೆಯ ಬಿಎಸ್ ಇ ಸಂವೇದಿ ಸೂಚ್ಯಂಕ 85.40 ಅಂಕಗಳ ಕುಸಿತದೊಂದಿಗೆ 51,849.48 ಅಂಕಗಳ ವಹಿವಾಟಿನೊಂದಿಗೆ ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ ಕೇವಲ 1.35 ತುಸು ಏರಿಕೆಯೊಂದಿಗೆ 15,576.20ರ ಗಡಿ ತಲುಪಿದೆ.
ಸೆನ್ಸೆಕ್ಸ್ ಕುಸಿತದಿಂದ ಐಟಿಸಿ, ಟೆಕ್ ಮಹೀಂದ್ರಾ, ಆ್ಯಕ್ಸಿಸ್ ಬ್ಯಾಂಕ್, ಏಷ್ಯನ್ ಪೇಂಟ್ಸ್, ಟಿಸಿಎಸ್, ಎಚ್ ಸಿಎಲ್ ಟೆಕ್, ಎಚ್ ಡಿಎಫ್ ಸಿ ಮತ್ತು ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ.
ಮತ್ತೊಂದೆಡೆ ಇಂಡಸ್ ಇಂಡ್ ಬ್ಯಾಂಕ್, ಪವರ್ ಗ್ರಿಡ್, ರಿಲಯನ್ಸ್ ಇಂಡಸ್ಟ್ರೀಸ್, ಬಜಾಜ್ ಆಟೋ ಮತ್ತು ಮಾರುತಿ ಷೇರುಗಳು ಲಾಭ ಗಳಿಸಿವೆ ಎಂದು ಮಾರುಕಟ್ಟೆ ವರದಿ ತಿಳಿಸಿದೆ.