ಮುಂಬಯಿ: ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿರುವುದು ಹೂಡಿಕೆದಾರರಲ್ಲಿ ಭರವಸೆ ಮೂಡಿಸಿದ್ದು, ಸತತ ಎರಡು ದಿನಗಳಿಂದ ನಷ್ಟದಲ್ಲಿದ್ದ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ ಶುಕ್ರವಾರ(ಮೇ 21) ಭರ್ಜರಿ 976 ಅಂಕಗಳಷ್ಟು ಏರಿಕೆ ಕಂಡು ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಇದರಿಂದ ಹೂಡಿಕೆದಾರರಿಗೆ 2.41 ಲಕ್ಷ ಕೋಟಿ ರೂಪಾಯಿಯಷ್ಟು ಲಾಭ ಗಳಿಸಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿಂದು 52,581 ಮಂದಿ ಗುಣಮುಖ; 32,218 ಹೊಸ ಪ್ರಕರಣ ಪತ್ತೆ, 353 ಜನರು ಸಾವು
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಬಿಎಸ್ ಇ 975.62 ಅಂಕಗಳಷ್ಟು ಏರಿಕೆಯಾಗಿದ್ದು, 50,540.48 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿದೆ. 2021ನೇ ಸಾಲಿನ ಮಾರ್ಚ್ ನಂತರ ಒಂದೇ ದಿನದಲ್ಲಿ ಸೆನ್ಸೆಕ್ಸ್ ದಾಖಲೆ ಪ್ರಮಾಣದ ಏರಿಕೆ ಕಂಡಂತಾಗಿದೆ.
ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 269.25 ಅಂಕ ಏರಿಕೆಯಾಗಿದ್ದು, 15,175.30 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
ಸೆನ್ಸೆಕ್ಸ್ ಏರಿಕೆಯಿಂದ ಎಚ್ ಡಿಎಫ್ ಸಿ ಬ್ಯಾಂಕ್, ಎಸ್ ಬಿಐ, ಇಂಡಸ್ ಇಂಡ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಕೋಟಕ್ ಬ್ಯಾಂಕ್ ಷೇರುಗಳು ಲಾಭಗಳಿಸಿವೆ. ಡಾ.ರೆಡ್ಡೀಸ್ ಮತ್ತು ಪವರ್ ಗ್ರಿಡ್ ಷೇರುಗಳು ಸ್ವಲ್ಪ ನಷ್ಟ ಅನುಭವಿಸಿದೆ.