ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಶುಕ್ರವಾರ(ಜೂನ್ 25) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 226 ಅಂಕ ಏರಿಕೆ ಕಂಡಿದ್ದು, ಇದರಿಂದ ಐಸಿಐಸಿಐ ಬ್ಯಾಂಕ್, ಇನ್ಫೋಸಿಸ್ ಷೇರುಗಳು ಹೆಚ್ಚಿನ ಲಾಭಗಳಿಸಿದೆ.
ಇದನ್ನೂ ಓದಿ:ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 226.04 ಅಂಕಗಳಷ್ಟು ಏರಿಕೆಯೊಂದಿಗೆ ದಾಖಲೆಯ 52,925.04 ಅಂಕದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 69.90 ಅಂಕ ಏರಿಕೆಯಾಗಿ 15,860.35ರ ಗಡಿ ದಾಟಿದೆ.
ಸೆನ್ಸೆಕ್ಸ್ ಏರಿಕೆಯಿಂದ ಟಾಟಾ ಸ್ಟೀಲ್, ಆ್ಯಕ್ಸಿಸ್ ಬ್ಯಾಂಕ್, ಎಸ್ ಬಿಐ, ಐಸಿಐಸಿಐ ಬ್ಯಾಂಕ್, ಬಜಾಜ್ ಫಿನ್ ಸರ್ವ್, ಎಲ್ ಆ್ಯಂಡ್ ಟಿ ಮತ್ತು ಮಾರುತಿ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ರಿಲಯನ್ಸ್ ಇಂಡಸ್ಟ್ರೀಸ್, ಎನ್ ಟಿಪಿಸಿ, ಎಚ್ ಯುಎಲ್, ಟೈಟಾನ್ ಮತ್ತು ಏಷ್ಯನ್ ಪೇಂಟ್ಸ್ ಷೇರುಗಳು ನಷ್ಟ ಕಂಡಿದೆ.
ಜಾಗತಿಕವಾಗಿಯೂ ಶಾಂಘೈ, ಹಾಂಗ್ ಕಾಂಗ್, ಸಿಯೋಲ್ ಮತ್ತು ಟೋಕಿಯೋ ಷೇರುಮಾರುಕಟ್ಟೆ ಸೆನ್ಸೆಕ್ಸ್ ಏರಿಕೆಯೊಂದಿಗೆ ವಹಿವಾಟು ಮುಕ್ತಾಯಗೊಳಿಸಿದೆ. ಯುರೋಪ್ ನಲ್ಲಿ ಈಕ್ವಿಟಿ ಮಿಶ್ರ ಪರಿಣಾಮದ ವಹಿವಾಟು ನಡೆಸಿದೆ.